JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, June 26, 2024

Government Employees Transfer Guidelines For the Year 2024-25

  Jnyanabhandar       Wednesday, June 26, 2024
Guidelines regarding Transfer of Government Employees

2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಇಂದು ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ.

ಅದರಲ್ಲಿ ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ಮೇಲೆ ಓದಲಾದ ದಿನಾಂಕ:07.06.2013ರ ಸರ್ಕಾರದ ಆದೇಶದಲ್ಲಿ ಹೊರಡಿಸಲಾದ ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಗಳನ್ನು ಹೊರಡಿಸುವುದು ಅವಶ್ಯವೆಂದು ಮನಗಾಣಲಾಗಿರುವುದರಿಂದ ಈ ಕೆಳಕಂಡಂತೆ ಆದೇಶಿಸಿದ್ದಾರೆ.

ಅದರಲ್ಲಿ ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ಮೇಲೆ ಓದಲಾದ ದಿನಾಂಕ:07.06.2013ರ ಸರ್ಕಾರದ ಆದೇಶದಲ್ಲಿ ಹೊರಡಿಸಲಾದ ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಗಳನ್ನು ಹೊರಡಿಸುವುದು ಅವಶ್ಯವೆಂದು ಮನಗಾಣಲಾಗಿರುವುದರಿಂದ ಈ ಕೆಳಕಂಡಂತೆ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ ಮೇಲೆ ಓದಲಾದ ದಿನಾಂಕ: 07.06.2013ರ ಆದೇಶವನ್ನು ರದ್ದುಪಡಿಸಿ, ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಈ ಆದೇಶದಲ್ಲಿ ಸೂಚಿಸಿರುವಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರವು ಇಚ್ಛಿಸುತ್ತದೆ. ಈ ಮಾರ್ಗಸೂಚಿಗಳು 2024-25 ನೇ ಸಾಲಿನಿಂದ ಜಾರಿಗೆ ಬರುತ್ತವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

2. ವಿವರಣೆ:- ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,-
(1) "ಸಕ್ಷಮ ಪ್ರಾಧಿಕಾರ" ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ
(2) "ವರ್ಗಾವಣೆ" ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ನಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ನಾನಕ್ಕೆ ಕಛೇರಿಯನ್ನು
ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.
(3) "ಚಲನವಲನ" ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.
ವಿವರಣೆ: ಚಲನವಲನ ಪಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.

(4) 'ಗುಂಪು-'ಎ', 'ಬಿ', 'ಸಿ', ಮತ್ತು 'ಡಿ' ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು.
(5) 'ಜೇಷ್ಠತಾ ಘಟಕ' ಎಂದರೆ ಒಂದು ಹುದ್ದೆಗೆ ಸಂಬಂಧಿಸಿದಂತೆ ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ;
3. ವರ್ಗಾವಣಾ ಪ್ರಕ್ರಿಯೆ:-
ಈ ಆದೇಶದಲ್ಲಿ ನಮೂದಿಸಿರುವ ವರ್ಗಾವಣೆ/ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಷರತ್ತುಗಳಿಗೊಳಪಟ್ಟು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.
4. ವರ್ಗಾವಣೆಯ ಬಗ್ಗೆ ನಿರ್ಬಂಧಗಳು/ ಸಕ್ಷಮ ಪ್ರಾಧಿಕಾರ ಹಾಗೂ ನೌಕರನ ಜವಾಬ್ದಾರಿಗಳು:- (1) ಪುಸಕ್ತ 2024-25ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆ/ ಚಲನವಲನಗಳ ಸಂಖ್ಯೆಯು ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ದಿನಾಂಕ: 25.06.2024 ರಿಂದ ದಿನಾಂಕ: 09.07.2024ರವರೆಗೆ ಸಾರ್ವತ್ರಿಕ ಸಚಿವರಿಗೆ ಅಧಿಕಾರ ಆಯಾ ಕೈಗೊಳ್ಳಲು ಇಲಾಖಾ ವರ್ಗಾವಣೆ
ಪ್ರತ್ಯಾಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.


logoblog

Thanks for reading Government Employees Transfer Guidelines For the Year 2024-25

Previous
« Prev Post

No comments:

Post a Comment

If You Have any Doubts, let me Comment Here