JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Monday, June 3, 2024

Guest Teacher Recruitment 2024

  Jnyanabhandar       Monday, June 3, 2024

In the academic year 2024-25 against vacant teaching posts in government primary schools, temporary appointment of guest teachers till the end of the academic year in the academic interest of the students.

2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು.

ರಾಜ್ಯಾಧ್ಯಂತ ಶಾಲೆಗಳು ಆರಂಭಗೊಂಡಿವೆ. 2024-25ನೇ ಸಾಲಿನ ಶೈಕ್ಷಣಿಕ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಶಾಲೆಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದು, ಶೈಕ್ಷಣಿಕ ವರ್ಷಾರಂಭದ ಮೊದಲೇ ಪಠ್ಯಪುಸ್ತಕ, ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಸರ್ಕಾರ ಮಾಡಿತ್ತು.

ಈ ಬೆನ್ನಲ್ಲೇ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕುಂಠಿತಗೊಳ್ಳಬಾರದು ಎನ್ನುವ ಕಾರಣಕ್ಕೆ ಬರೋಬ್ಬರಿ 33,863 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಜ್ಞಾಪನ ಹೊರಡಿಸಿದ್ದು, 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35000, ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-01ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ ಎಂದಿದ್ದಾರೆ.

ಒಟ್ಟು-35000. ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ (ಪಿ.ಎಸ್.ಟಿ ಮತ್ತು ಜಿ.ಪಿ.ಟಿ) ಒಟ್ಟು-33863. ಹುದ್ದೆಗಳಿಗೆ ಎದುರಾಗಿ ಮೊದಲ ಹಂತದಲ್ಲಿ ಸದರಿ 33863, ಖಾಲಿ ಹುದ್ದೆಗಳಿಗೆ ಜಿಲ್ಲಾವಾರು ತಾಲ್ಲೂಕುವಾರು ಅಥಿತಿ ಶಿಕ್ಷಕರನ್ನು ಉಲ್ಲೇಖ-02 & 03 ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೊಳಪಟ್ಟು, ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.

ಷರತ್ತುಗಳು:-
ಅದರಂತೆ, ಕಳಕಂಡ ಷರತ್ತಿಗೊಳಪಟ್ಟು, ತಾತ್ಕಾಲಿಕವಾಗಿ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಸೂಚಿಸಿ ತಾಲ್ಲೂಕುವಾರು & ಜಿಲ್ಲಾವಾರು ಹಂಚಿಕೆ ಮಾಡಿದ ಅಥಿತಿ ಶಿಕ್ಷಕರ ವಿವರದ ಅನುಬಂಧ ಅಡಕಗೊಳಿಸಿದ.

1. ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದು. 2. ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿ ಸಂಬಂಧಪಟ್ಟ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.


3. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ . ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.


4. ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿ ವಿಶೇಷವಾಗಿ ಪ್ರಾರಂಭಿಸಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ ಶಾಲೆಗಳು/ ದ್ವಿಭಾಷಾ (Bilingual) (ಆಂಗ್ಲಭಾಷಾ) ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇಕಡ 100 ರಮ್ಯ ಅತಿಥಿ ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು.


5. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿರುವ ಕನಿಮ್ಮ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡತಕ್ಕದ್ದು.


6. ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡುವುದು.


7. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ 10000/- ಆಗಿರುತ್ತದೆ. 8. ಅಥಿತಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗಳಿಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂತಹ ಅಥಿತಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ತದನಂತರ ತಾಲ್ಲೂಕಿನಲ್ಲಿ ಅಗತ್ಯಾನುಸಾರ ವರ್ಗಾವಣೆಯಿಂದ ಅಥವಾ ಇತರೆ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು/ ಹುದ್ದೆಯನ್ನು ಸ್ಥಳೀಯವಾಗಿ ಹಂಚಿಕೆ ಮಾಡಿ ಕ್ರಮವಹಿಸುವುದು.


9. ಪ್ರಸ್ತುತ ವರ್ಗಾವಣೆ ತಂತ್ರಾಂಶದಲ್ಲಿ ಇದ್ದಂತೆ ಖಾಲಿಹುದ್ದೆಗಳ ಅನುಸಾರ ತಾಲ್ಲೂಕುವಾರು ಅಥಿತಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು ಸದರಿ ಅಥಿತಿ ಶಿಕ್ಷಕರ ಹುದ್ದೆಗಳನ್ನು ತಾಲ್ಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿರವ ಈ ಕಛೇರಿಗೆ ಸಲ್ಲಿಸಿದ ನಂತರ ತಾಲ್ಲೂಕಿನಿಂದ ತಾಲ್ಲೂಕಿಗೆ (ಜಿಲ್ಲೆಯ ಒಳಗೆ) ಅಥಿತಿ ಶಿಕ್ಷಕರ ಮರುಹಂಚಿಕೆ ಮಾಡುವಂತಿಲ್ಲ.

ಮಲ್ಕಂಡ ಷರತ್ತುಗಳನ್ನು ಪಾರದರ್ಶಕವಾಗಿ ಚಾಚು ತಪ್ಪದೇ ಪಾಲಿಸಲು ಸಂಬಂಧಪಟ್ಟ ಮುಖ್ಯ ಶಿಕ್ಷಕರುಗಳಿಗೆ ಸೂಚನಗಳನ್ನು ಜಿಲ್ಲಾ ಉಪನಿರ್ದೇಶಕರು/ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡುವುದು. ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಯಾವುದೇ ಲೋಪದೋಷಗಳಾದಲ್ಲಿ ಸಂಬಂಧವು ತಾಲ್ಲೂರು/ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮಕ್ಕೆ ಒಳವಡಿಸಲಾಗುವುದು ಎಂದಿದ್ದಾರೆ.

ತಕ್ಷಣದಿಂದಲೇ ನೇಮಕ ಮಾಡಿಕೊಳ್ಳಲು ಸಹಾಯವಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಗತ್ಯತ ಅವಶ್ಯಕತೆ ಇರುವ ಶಾಲೆಗಳ ಖಾಲಿ ಯದ್ಯಗಳಿಗೆ ನಿಯಮಾನುಸಾರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಸು ನಂತದಲ್ಲಿ ಶಾಲಾವಾರು ಯದ ಹಂಚಿಕೆ ಆದೇಶವನ್ನು ಕಡ್ಡಾಯವಾಗಿ ಹೊರಡಿಸುವುದು.

ನೇಮಕಾತಿಗೊಂಡ ಅತಿಥಿ ಶಿಕ್ಷಕರ ವಿವರಗಳನ್ನು ಕೆಳಕಂಡ ನಿಗದಿತ ನಮೂನೆಯಲ್ಲಿ ನಾವಾಗು ಗಡೀಕರಿಸಿ ಈ "ಛೇರಿಗೆ ಜಿಲ್ಲಾ ಉಪನಿರ್ದೇಶಕರು ವಿಳಂಬಕ ಅವಕಾಶ ನೀಡದ ದಿನಾಂಕ: 15-06- 2024ರೊಳಗೆ ಅಧಿತಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ವಿವರವನ್ನು ತಾಲ್ಲೂಕು ಪಂಚಾಯಿತಿವಾರು ಗುದ್ರಗಳ ನಿರ್ವನನ್ನು ಕೆಳಗಿನ ನಮೂನೆಯಲ್ಲಿ ಕ್ರೋಡೀಕರಿಸಿ ದೃಡೀಕೃತ (ಪಿ.ಡಿ.ಎಫ್ ಮಾದರಿಯಲ್ಲಿ) ಸಾಫ್ಟ್ ಪ್ರತಿಯನ್ನು ಈ ಕಛೇರಿy ಇ-ಮೇಲ್ ವಿಳಾಸ, primarydpi@gmail.com ಮುಖಾಂತರ ಸಲ್ಲಿಸುವುದು. ತಪ್ಪಿದಲ್ಲಿ ರಕ್ತ ಶಿಸ್ತಕಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.☞☞☞☞☞☞
Click Here To Download File

logoblog

Thanks for reading Guest Teacher Recruitment 2024

Previous
« Prev Post

No comments:

Post a Comment

If You Have any Doubts, let me Comment Here