KPCL FINAL SCORE LIST 2023
ಕೆಪಿಸಿಎಲ್ ನ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ ಸಂಬಂಧ 622 ಹುದ್ದೆಗಳ ನೇಮಕಕ್ಕೆ ನಡೆಸಲಾಗಿದ್ದಂತ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಪಟ್ಟಿಯನ್ನು ಕೆಇಎ ಪ್ರಕಟಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( Karnataka Examinations Authority-KEA) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ದಿನಾಂಕ 18-02-2024 ರಂದು ನಡೆಸಲಾಗಿದೆ ಎಂದು ತಿಳಿಸಿದೆ.
ಸದರಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು 17-04-2024 ರಂದು ಪ್ರಕಟಿಸಲಾಗಿದೆ. ಹುದ್ದೆವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ದಿನಾಂಕ 03-05-2024 ರಂದು ಪ್ರಕಟಿಸಿ ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿತ್ತು. ಅದರಂತೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ. ಕಳೆದ ಬಾರಿ ನಡೆಸಿದ ಪರೀಕ್ಷೆಯಂತೆ ಈ ಬಾರಿಯೂ, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕಾರಾತ್ಮಕ ಅಂಕವನ್ನು ಕಡಿತಗೊಳಿಸಿ ಅಂತಿಮ ಅಂಕ ಪಟ್ಟಿಯನ್ನು ಸಿದ್ಧಪಡಿಸುವಂತೆ ಕೆಪಿಸಿಎಲ್ ಸಂಸ್ಥೆಯಿಂದ ಲಿಖಿತ ರೂಪದಲ್ಲಿ ಸೂಚಿಸಿದೆ ಎಂದು ಹೇಳಿದೆ.
ಅದರಂತೆ ಹುದ್ದೆವಾರು ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂತಿಮ ಅಂಕ ಪಟ್ಟಿಯನ್ನು ಸಿದ್ಧಪಡಿಸಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಮತ್ತು ಸದರಿ ಅಂತಿಮ ಅಂಕ ಪಟ್ಟಿಯನ್ನು ಕೆಪಿಸಿಎಲ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು. ಕೆಪಿಸಿಎಲ್ ಸಂಸ್ಥೆಯಿಂದ ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದೆ.
No comments:
Post a Comment
If You Have any Doubts, let me Comment Here