KSRTC Student Bus Pass Online Application 2024
ಶಾಲಾ-ಕಾಲೇಜುಗಳು ಅಧಿಕೃತವಾಗಿ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ಬಸ್ ಪಾಸ್ ಒದಗಿಸಲು ಕೆಎಸ್‌ಆರ್ ಟಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಸೇವಾಸಿಂಧು https://sevasindhuservices.karnataka.gov.in/ buspassservices/ ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳುಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದಿದೆ.
ವಿದ್ಯಾರ್ಥಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು ಪೋರ್ಟಲ್ ಐಡಿ URL-https://sevasindhuservices.karnataka.gov.in/buspassservices/
ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುಧೇ ಶುಲ್ಕ ಇರುವುದಿಲ್ಲ.
ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.
ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು ಆeಛಿಟಚಿಡಿಚಿಣioಟಿ ಈoಡಿmಅನ್ನು ಸೇವಾಸಿಂಧು ತಂತ್ರಾAಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ (https://ksrtc.karnataka.gov.in/studentpass)ಡೌನ್‌ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submiಣಮಾಡುವುದು.
ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿ ಪಾಸುಗಳನ್ನು ದಿನಾಂಕ: 01.06.2024 ರಿಂದ ನಿಗದಿತ ಪಾಸ್ ಕೌಂಟರ್ ಗಳಲ್ಲಿ ವಿತರಿಸಲಾಗುವುದು.
ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ.ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ.ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನುಪಡೆಯಬಹುದಾಗಿರುತ್ತದೆ.
ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in/student pass
ಹೀಗಿದೆ ವಿದ್ಯಾರ್ಥಿ ಪಾಸಿನ ದರದ ವಿವರ
ಪ್ರಾಥಮಿಕ ಶಾಲೆ - 10 ತಿಂಗಳ ಅವಧಿಗೆ ಸಾಮಾನ್ಯ ವಿದ್ಯಾರ್ಥಿಗಳಿಗೆ 100+ 50 ಸಂಸ್ಕರಣಾ ಶುಲ್ಕ ಸೇರಿ ರೂ.150. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ.750 ಸಾಮಾನ್ಯ ವರ್ಗದವರಿಗೆ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
ಪ್ರೌಢಶಾಲಾ ಬಾಲಕಿಯರಿಗೆ 10 ತಿಂಗಳಿಗೆ ರೂ.550 ಸಾಮಾನ್ಯ ವಿದ್ಯಾರ್ಥಿಗಳಿಗೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
ಕಾಲೇಜು, ಡಿಪ್ಲೋಮಾ ಸಾಮಾನ್ಯ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ.1050. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
ಐಟಿಐ 12 ತಿಂಗಳ ಸಾಮಾನ್ಯ ವಿದ್ಯಾರ್ಥಿಗಳ ಬಸ್ ಪಾಸ್ ಗೆ ರೂ.1310. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.160.
ವೃತ್ತಿಪರ ಕೋರ್ಸುಗಳ 10 ತಿಂಗಳು ಸಾಮಾನ್ಯ ವಿದ್ಯಾರ್ಥಿಗಳ ಪಾಸ್ ಗೆ ರೂ.1550. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
ಸಂಜೆ ಕಾಲೇಜು, ಪಿಹೆಚ್ ಡಿ ವಿದ್ಯಾರ್ಥಿಗಳಿಗೆ 10 ತಿಂಗಳ ಸಾಮಾನ್ಯ ವಿದ್ಯಾರ್ಥಿಗಳ ಬಸ್ ಪಾಸ್ ಗೆ ರೂ.1350. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ರೂ.150.
No comments:
Post a Comment
If You Have any Doubts, let me Comment Here