PM Kisan 17th Installment 2024
ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ನಾಳೆ (ಜೂನ್ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ.ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Kisan Samman Nidhi).
3 ಕಂತುಗಳಲ್ಲಿ ಪಾವತಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇ-ಕೆವೈಸಿ ಕಡ್ಡಾಯ
ಕಿಸಾನ್ ಸಮ್ಮಾನ್ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಮಾಡಬಹುದು.
How To Check PM Kisan 17th Installment credit Status
ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.
ಅಧಿಕೃತ ವೆಬ್‌ಸೈಟ್ https://pmkisan.gov.in/ ಭೇಟಿ ನೀಡಿ
ಆಗ ಓಪನ್ ಆಗುವ ಪೇಜ್‌ನ ಬಲ ಬದಿಯಲ್ಲಿರುವ 'Know Your Status' ಆಯ್ಕೆ ಮೇಲೆ ಕ್ಲಿಕ್ ಮಾಡಿ
ರಿಜಿಸ್ಟ್ರೇಷನ್ ನಂಬರ್ ನಮೂದಿಸಿ, ಕ್ಯಾಪ್ಚ ಕೋಡ್ ಭರ್ತಿ ಮಾಡಿ 'Get Data' ಆಯ್ಕೆಯನ್ನು ಸೆಲೆಕ್ಟ್ ಮಾಡಿ
ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್ ಮೇಲೆ ಮೂಡುತ್ತದೆ.
How To Rigister For PM Kisan
ಹೆಸರು ನೋಂದಾಯಿಸುವ ವಿಧಾನ
ಅಧಿಕೃತ ವೆಬ್‌ಸೈಟ್ pmkisan.gov.in ಭೇಟಿ ನೀಡಿ
'New Farmer Registration' ಆಯ್ಕೆ ಮೇಲೆ ಕಲಿಕ್ ಮಾಡಿ ಮತ್ತು ಆಧಾರ್ ಕಾರ್ಡ್ ನಂಬರ್ ನಮೂದಿಸಿ ಕ್ಯಾಪ್ಚ ಕೋಡ್ ಭರ್ತಿ ಮಾಡಿ
ಅಗತ್ಯ ಮಾಹಿತಿ ತುಂಬಿ 'Yes' ಬಟನ್ ಕ್ಲಿಕ್ ಮಾಡಿ
ಅರ್ಜಿ ಫಾರಂ ತುಂಬಿ, ಸೇವ್ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್ ಔಟ್ ತೆಗೆದಿಡಿ.
How To Check PM Kisan Beneficiary List?
ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ
ಅಧಿಕೃತ ವೆಬ್‌ಸೈಟ್ https://pmkisan.gov.in/ಗೆ ಭೇಟಿ ನೀಡಿ
ಆಗ ತೆರೆದುಕೊಳ್ಳುತ್ತದೆ.
ಪುಟದಲ್ಲಿನ 'Beneficiary list' ಆಯ್ಕೆಯ ಮೇಲೆ ಕ್ಲಿಕ್ ಮಾಡಿ
*👉ಮೊದಲಿಗೆ ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ*
*👉ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ*
*👉ನಿಮ್ಮ ತಾಲೂಕು ಆಯ್ಕೆ ಮಾಡಿ*
*👉ನಂತರ ನಿಮ್ಮ ಊರನ್ನು ಆಯ್ಕೆ ಮಾಡಿ.*
*➖ಇಲ್ಲಿ ನಿಮಗೆ ನಿಮ್ಮ ಊರಿನ ಎಲ್ಲ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ ದೊರೆಯುವುದು.*
➖➖➖➖➖➖
No comments:
Post a Comment
If You Have any Doubts, let me Comment Here