RDPR Gram panchayat Recruitment Updates
ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ಕುರಿತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ನಿರ್ದೇಶಕರು (ಆ-1), ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಈ ಪತ್ರವು ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಖಾಲಿಯಾಗಿರುವ ಕರವಸೂಲಿಗಾರರರು, ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಕುರಿತು ಎಂಬ ವಿಷಯ ಒಳಗೊಂಡಿದೆ.
ಪತ್ರದ ವಿವರಗಳು: ಪತ್ರದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಿಬ್ಬಂದಿಯ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನದ ಮತ್ತು ಸೇವಾ ಷರತ್ತುಗಳ ಬಗ್ಗೆ, ರಚಿಸಿರುವ ನಿಯಮಗಳಲ್ಲಿ ಪ್ರತಿ ಗ್ರಾಮ ಪಂಚಾಯತಿಯ ಹುದ್ದೆಗಳ ಸಂಖ್ಯೆಯನ್ನು ಪ್ರತ್ಯೇಕವಾದ ಸರ್ಕಾರಿ ಆದೇಶದಲ್ಲಿ ಒದಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದರ ಅನುಗುಣವಾಗಿ ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಸಿಬ್ಬಂದಿ ಸಂಖ್ಯೆಯನ್ನು ನಿಗದಿಪಡಿಸುವ ಬಗ್ಗೆ ನಿಯಮಗಳಲ್ಲಿ ತಿದ್ದುಪಡಿ ತರುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವುದರಿಂದ, ಎಲ್ಲಾ ಜಿಲ್ಲಾ ಪಂಚಾಯತಿಗಳು ಮುಂದಿನ ಆದೇಶ ಬರುವವರೆಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಸಂಖ್ಯೆಯನ್ನು ನಿಗದಿಪಡಿಸುವ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಂತೆ ಹಾಗೂ ಮುಂದಿನ ಆದೇಶ ನಿರೀಕ್ಷಿಸುವಂತೆ ತಿಳಿಸಿರುತ್ತದೆ ಎಂದು ಹೇಳಿತ್ತು.
ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಕರವಸೂಲಿಗಾರರು, ಕರ್ಕ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು, ವಾಟರ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಹುದ್ದೆಗಳಿಗೆ ಜಿಲ್ಲಾ ಪಂಚಾಯತಿಯಿಂದ ಈಗಾಗಲೇ ಅನುಮೋದನೆ ಹೊಂದಿರುವ ಸದರಿ ನೌಕರರ ವಯೋನಿವೃತ್ತಿಯಿಂದ, ಮುಂಬಡ್ತಿಯಿಂದ ಅಥವಾ ಮರಣಹೊಂದಿರುವ ಕಾರಣಗಳಿಂದಾಗಿ ಖಾಲಿಯಾಗಿದ್ದಲ್ಲಿ ಭರ್ತಿ ಮಾಡಿಕೊಳ್ಳಬೇಕು.
ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಖಾಲಿಯಾದ ಈ ಮೇಲಿನ ನಾಲ್ಕು ವೃಂದದ ಹುದ್ದೆಗಳಲ್ಲಿ ಯಾರೂ ಕಾರ್ಯನಿರ್ವಹಿಸದೇ ಇದಲ್ಲಿ, ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನು ಸರ್ಕಾರದ ಅಧಿಸೂಚನೆ ದಿನಾಂಕ 29/09/2020ರಲ್ಲಿ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲಾ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದೆ.
ಅಲ್ಲದೇ ಮುಂದುವರೆದು, ನೇಮಕಾತಿಯ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಲು ಕೋರಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಜಿಲ್ಲಾ ಪಂಚಾಯಿತಿ ಸಿಇಒಗಳು ಆದೇಶವನ್ನು ಹೊರಡಿಸಲಿದ್ದಾರೆ.
ಈಗಾಗಲೇ ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿ ಕಾರ್ಯ ನಿರ್ವಹಣೆ ಮಾಡುವ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿ/ ಸಿಬ್ಬಂದಿಗಳ ವರ್ಗಾವಣೆ ಒಪ್ಪಿಗೆ ನೀಡಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಬಿ. ನವೀನ್ ಕುಮಾರ್ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಗ್ರಾ. ಪಂ) ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಆದೇಶ ಹೊರಡಿಸಿದ್ದಾರೆ.
☞☞☞☞☞☞
No comments:
Post a Comment
If You Have any Doubts, let me Comment Here