Regarding the transfer of specially minded government employees
ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ವಿಸ್ತೃತ ಮಾರ್ಗಸೂಚಿ ಪ್ರಕಟಿಸಿದೆ.
ಮೇಲೆ ಓದಲಾದ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಕುರಿತಂತೆ ವಿಸ್ತ್ರತ ಮಾರ್ಗಸೂಚಿಗಳನ್ನು ನೀಡಲಾಗಿದೆ.
ಸದರಿ ಆದೇಶದ ಕಂಡಿಕೆ 9.ಅ.viiರಲ್ಲಿ ಮತ್ತು ಉಲ್ಲೇಖ(2)ರ ಸರ್ಕಾರಿ ಆದೇಶದಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಕೈಗೊಳ್ಳುವ ಬಗ್ಗೆ ತಿಳಿಸಲಾಗಿದೆ.
ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ನಯ ವಿಶೇಷ ಚೇತನ ನೌಕರರಿಗೆ ಮತ್ತು ವಿಶೇಷ ಚೇತನ ಅವಲಂಬಿತರ ಪಾಲನ ಪೋಷಣೆಯ ಜವಾಬ್ದಾರಿ ಹೊಂದಿರುವ ನೌಕರರಿಗೆ ಸಾಮಾನ್ಯ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು, ವರ್ಗಾವಣೆ ಮತ್ತು ಪದೋನ್ನತ್ತಿಯ ನಂತರದಲ್ಲಿ ಸ್ಥಳ ನಿಯುಕ್ತಿಯಲ್ಲಿ ಪ್ರಾಶಸ್ತ್ರ ನೀಡುವುದು, ನೇಮಕಾತಿ ನಂತರದಲ್ಲಿ ನೀಡುವ ಆರಂಭಿಕ ಸ್ಥಳ ನಿಯುಕ್ತಿಯನ್ನು ಅವರ ವಾಸಸ್ಥಳದ ಹತ್ತಿರದ ಸ್ಥಳಕ್ಕೆ ನೀಡುವುದನ್ನು ಒಳಗೊಂಡಂತೆ, ಅವರು ಘನತೆಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿರುತ್ತದೆ. ಆದ್ದರಿಂದ ವಿಶೇಷ ಚೇತನ ನಿಯಂತ್ರಿಸಲು ಸರ್ಕಾರವು 2016ರ ಕಾಯ್ದೆಯ ಅಂಶಗಳನ್ವಯ ಕೆಳಕಂಡಂತೆ ಆದೇಶಿಸಿದ. ನೌಕರರ ವರ್ಗಾವಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 26 ಸೇನೌವ 2022 ದಿನಾಂಕ: 12.06.2024 ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಉಲ್ಲೇಖ 1ರ ಸರ್ಕಾರಿ ಆದೇಶದ ಕಂಡಿಕೆ 9.ಅ.vii ಕ್ಕೆ ಈ ಕೆಳಕಂಡ ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿದೆ.
(ಎ) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;
(ಬಿ) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು.
(ಸಿ) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
(ಡಿ) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.
No comments:
Post a Comment
If You Have any Doubts, let me Comment Here