Revised Provisional Score List of Various Boards/Corporations
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ನೇಮಕಾತಿಗಳಿಗೆ ಅರ್ಜಿಯನ್ನು ಕರೆಯಲಾಗಿತ್ತು. ಆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಲಾಗಿತ್ತು. ಈಗ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಮಾಹಿತಿ ಹಂಚಿಕೊಂಡಿದ್ದು, ಕಿಯೋನಿಕ್ಸ್, ಎಂಎಸ್‌ಐಎಲ್ ಸೇರಿದಂತೆ 5 ನಿಗಮ- ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 28-11-2023 ರಿಂದ 25-11-2023ರವರೆಗೆ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನೇಮಕಾತಿಗೆ ಪರೀಕ್ಷೆ ನಡೆಸಲಾಗಿತ್ತು ಎಂದಿದೆ.
ಈ ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 22-04-2024ರಂದು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿರುತ್ತದೆ. ಆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಪರಿಷ್ಕೃತ ತಾತ್ಕಾಲಿಕ ಅಭ್ಯರ್ಥಿಗಳ ಅಂಕಪಟ್ಟಿಯನ್ನು https://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಪರಿಷ್ಕೃತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ kea2023exam@gmail.com ಗೆ ಇ-ಮೇಲ್ ಮೂಲಕ ದಿನಾಂಕ 14-06-2024ರ ಮಧ್ಯಾಹ್ನ 12 ಗಂಟೆಯ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.
No comments:
Post a Comment
If You Have any Doubts, let me Comment Here