RTE Seat Allotment Results 1st Round - 2024
ಶಾಲಾ ಶಿಕ್ಷಣ ಇಲಾಖೆಯಿಂದ ಮೊದಲ ಸುತ್ತಿನ ಆರ್ ಟಿ ಇ ಸೀಟುಗಳನ್ನು ಹಂಚಿಕೆ ಮಾಡಿ, ಪಟ್ಟಿ ಪ್ರಕಟಿಸಲಾಗಿದೆ. ಜೂನ್.19ರ ಒಳಗಾಗಿ ಪೋಷಕರು ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಸೂಚಿಸಿದೆ.
ಇಂದು ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅದರಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪವೇಶಕ್ಕಾಗಿ ಅರ್ಹ 15895 ಅರ್ಜಿಗಳನ್ನು ಮೊದಲ ಸುತ್ತಿನ ಲಾಟರಿಗೆ ಪರಿಗಣಿಸಿದ್ದು ದಿನಾಂಕ:07.06.2024ರಂದು ಮೊದಲನೇ ಸುತ್ತಿನ ಲಾಟರಿಯನ್ನು ಆನ್‌ಲೈನ್ ಮೂಲಕ ನಡೆಸಲಾಗಿದೆ ಎಂದಿದ್ದಾರೆ.
ಈ ಮೊದಲನೇ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ 6090 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಪೋಷಕರು ದಿನಾಂಕ:08.06.2024 ರಿಂದ 19.06.2024 ರೂಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾತಿ ಮಾಡಲು ತಿಳಿಸಿದ. ಸೀಟು ಹಂಚಿಕೆ ವಿವರ ಇಲಾಖಾ ವೆಬ್‌ಸೈಟ್ https://schooleducation.karnataka.gov.in/en ನಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ.
No comments:
Post a Comment
If You Have any Doubts, let me Comment Here