384 KAS EXAM DATE 2024
Time Table for Prelims Examination for the post of Gazetted Probationers is Published
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮಾರ್ಚ್ ತಿಂಗಳಲ್ಲಿ ಹೊರಡಿಸಿದ್ದ ಅಧಿಸೂಚನೆಗೆ, ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳಿಗೆ ಆ.28ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಸೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 'ಗ್ರೂಪ್ ಎ' ಹುದ್ದೆಗಳು ಮತ್ತು 225 'ಗ್ರೂಪ್ ಬಿ' ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ 77 ಹುದ್ದೆಗಳು ಸೇರಿ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಮಾರ್ಚ್ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.
ಮಾ.4ರಿಂದ ಏ.4ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಈ ಅವಧಿಯಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಪರೀಕ್ಷೆಯನ್ನು ತಾತ್ಕಾಲಿಕ ಅವಧಿಗೆ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈಗ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಸರ್ಕಾರ ಆ.28ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದೆ.
25-08-2024ರ ಭಾನುವಾರ ಬೆಳಗ್ಗೆ 10ರಿಂದ 12 ಗಂಟೆವೆರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆವರೆಗೆ ಪತ್ರಿಕೆ-2ರ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಕರ್ನಾಟಕ ಲೋಕಸ ಸೇವಾ ಆಯೋಗದಿಂದ ಮಾಹಿತಿ ನೀಡಲಾಗಿದೆ.
Time Table for Prelims Examination for the post of Gazetted Probationers is Published
No comments:
Post a Comment
If You Have any Doubts, let me Comment Here