Ambedkar Photo Compulsory In All Offices
ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ . ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.
ಮುಂದುವರೆದು, ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
No comments:
Post a Comment
If You Have any Doubts, let me Comment Here