IPS Officers Transfer Order Dated 02-07-2024
ರಾಜ್ಯ ಸರ್ಕಾರದಿಂದ ವಾರ್ತಾ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ( ips hemant nimbalkar ) ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್:1998), ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಪೋಸ್ಟಿಂಗ್ಗಾಗಿ ಕಾಯುತ್ತಿರುವವರು) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಮತ್ತು ಆಯುಕ್ತರಾಗಿ ನೇಮಿಸಲಾಗಿದೆ ಅಂತ ತಿಳಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಬಿ.ಬಿ.ಎಂ.ಪಿ.ಯ ವಿಶೇಷ ಆಯುಕ್ತರಾಗಿ (ಆರೋಗ್ಯ) ನೇಮಿಸಲಾಗಿದೆ.
No comments:
Post a Comment
If You Have any Doubts, let me Comment Here