Karnataka Government Cabinet Meeting Highlights
ದಿನಾಂಕ 4-07-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ನಡೆಸಿದ ಪತ್ರಿಕಾ ಗೋಷ್ಠಿಯ ಮುಖ್ಯಾಂಶಗಳನ್ನು ಮುಂದೆ ಓದಿ.
1.ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 114 ಬಿಸಿಎ 2022 (ಭಾ-1) ದಿನಾಂಕ: 04.11.2023 ರಲ್ಲಿ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ "To bring all urban and Local Bodies Election wing under the control of DPAR" ಎಂಬ ಶಿಫಾರಸ್ಸನ್ನು ಕೈಬಿಡುವುದು.
ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.
2.ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ದಿನಾಂಕ: 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.
3.5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ದಿನಾಂಕ: 28.02.2025 ರವರೆಗೆ ವಿಸ್ತರಿಸುವ ಸಂಬಂಧ ಆಯೋಗದ ಅವಧಿಯನ್ನು 28ನೇ ಫೆಬ್ರವರಿ 2025 ರವರೆಗೆ ವಿಸ್ತರಿಸುವ ಬಗ್ಗೆ ಹಾಗೂ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ತಿಳಿಸುವ ಬಗ್ಗೆ ಸಚಿವ ಸಂಪುಟದ ಅನುಮೋದನೆ ನೀಡಿದೆ.
4.563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಪ್ರಯೋಗಾಲಯಗಳನ್ನು ಅಗತ್ಯವಿರುವ ಸಾಮಗ್ರಿಗಳನ್ನು ರೂ.2964.20 ಲಕ್ಷಗಳು ಹಾಗೂ ರೂ.2402.28 ಲಕ್ಷಗಳ ಔಷಧಿಗಳು ಒಟ್ಟು ರೂ.53.66 ಕೋಟಿಗಳ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಭರಿಸಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಏSಒSಅಐ ಮುಖಾಂತರ ಖರೀದಿಸಿ ಸರಬರಾಜು ಮಾಡಲು ಸಚಿವ ಸಂಪುಟ ಒಪ್ಪಿದೆ.
5.2024-25ನೇ ಸಾಲಿನ ಆಯವ್ಯಯ ಕಂಡಿಕೆ 114ರ ಘೋಷಣೆಯನ್ವಯ 100 ಹಾಸಿಗೆಗಳ ಸಾಮಥ್ರ್ಯದ 07 ತಾಲ್ಲೂಕು ಆಸ್ಪತ್ರೆಗಳ (ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕುಗಳು) ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ರೂ.256.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಆಸ್ಪತ್ರೆಗಳ ಕಟ್ಟಡ ಕಾಮಗಾರಿಗಳಿಗೆ ತಗಲುವ ವೆಚ್ಚವನ್ನು ರಾಜ್ಯವಲಯದ ಲೆಕ್ಕ ಶೀರ್ಷಿಕೆ: 4210-01-110-1-19-436ರ ನಬಾರ್ಡ್ ಯೋಜನೆಯಡಿ ಭರಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪಿಡಿಎಫ್ ಆವೃತ್ತಿ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here