KSET Exam Notification 2024
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) - 2024
ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್- 2024) ಅನ್ನು 24ನೇ ನವೆಂಬರ್ 2024 (ಭಾನುವಾರ) ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿದೆ.
1) ಅಧಿಸೂಚನೆ ಹೊರಡಿಸಲಾಗುವ ದಿನಾಂಕ 13.07.2024
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ 22.07.2024 :
3) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 22.08.2024
4) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 26.08.2024
5) ಪರೀಕ್ಷಾ ದಿನಾಂಕ
24.11.2024
ಅಭ್ಯರ್ಥಿಗಳು ಕೆಸೆಟ್-2024ಕ್ಕೆ "Online" ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯಾವುದೇ ಇತರ ನಮೂನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. KEA ವೆಬ್ ಸೈಟ್ http:/kea.kar.nic.in ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ಮುನ್ನ ಈ ಅಧಿಸೂಚನೆಯನ್ನು ಗಮನವಿಟ್ಟು ಓದಿ ನಂತರ ಅರ್ಜಿಯನ್ನು ಭರ್ತಿಮಾಡಬೇಕು.
ಕೆಸೆಟ್ (KSET) 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ ವಿವರಗಳನ್ನು ಪುಟ ಸಂಖ್ಯೆ: 07 ಮತ್ತು 8 ರಲ್ಲಿ ನೀಡಲಾಗಿದೆ.
ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಪದವಿ ಕಾಲೇಜು | ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ ಹಾಗೂ ಆಯಾ ಸಂಸ್ಥೆಗಳ ನಿಯಮ ಮತ್ತು ಕಾಯ್ದೆಗಳಿಗೆ ಒಳಪಟ್ಟಿರುತ್ತಾರೆ.
ವಿಕಲಚೇತನ (PwD), ತೃತೀಯ ಲಿಂಗ, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಮತ್ತು ಇತರೆ ಹಿಂದುಳಿದ ವರ್ಗದ (ಪ್ರವರ್ಗ-I, IIA, IIB, IIIA, ಮತ್ತು IIIB) ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದವರ ಪಟ್ಟಿಯಲ್ಲಿರುವಂತಿರಬೇಕು.
1) ಅರ್ಹತಾ ನಿಬಂಧನೆಗಳು :
1) ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ / ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ಅಂಕಗಳನ್ನು (ಪೂರ್ಣಾಂಕಿತ ಗೊಳಿಸಿರಬಾರದು) ಪಡೆದಿರಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-1, IIA, IIB, IIIA, IIIB), ವಿಕಲಚೇತನರು (PwD) ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50% ರಷ್ಟು (ಪೂರ್ಣಾಂಕಿತ ಗೊಳಿಸಿರಬಾರದು) ಅಂಕಗಳನ್ನು ಪಡೆದಿರಬೇಕು.
2) ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಪ್ರಥಮ ಮತ್ತು ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರವೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯನ್ನು, ಸಾಮಾನ್ಯ ವರ್ಗದವರು ಶೇ.55% ರಷ್ಟು ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-I, IIA, IIB, IIIA, ಮತ್ತು IIIB, ವಿಕಲಚೇತನರು (PwD) ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು, ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷದೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು. ಇಲ್ಲವಾದಲ್ಲಿ ಅಂತಹವರ ಅರ್ಹತೆಯನ್ನು ರದ್ದುಪಡಿಸಲಾಗುವುದು.
) ವಯೋಮಿತಿ :
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಟ ವಯೋಮಿತಿ ಇರುವುದಿಲ್ಲ.
III) వినాయత్ :
ಕರ್ನಾಟಕ ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ, ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಕಾಲೇಜುಗಳು / ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಸರ್ಕಾರಿ / ಅನುದಾನಿತ / ಖಾಸಗಿ) ನೇಮಕವಾಗಬೇಕಾದರೆ, ಅಭ್ಯರ್ಥಿಗಳು ಕಡ್ಡಾಯವಾಗಿ ಕೆಸೆಟ್ ಅಥವಾ ಎನ್.ಇ.ಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕೆಂಬ ನಿಯಮವಿದೆ.
ಅ) ಯು.ಜಿ.ಸಿ ಕಾಲಕಾಲಕ್ಕೆ ಹೊರಡಿಸುವ ನಿಬಂಧನೆಗಳು, ಯು.ಜಿ.ಸಿ ಮಾರ್ಗಸೂಚಿಗಳು ಮತ್ತು ಅಧಿನಿಯಮಗಳ ಅನ್ವಯ ಕೆಸೆಟ್ ಅರ್ಹತೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.
ಆ) ಅಭ್ಯರ್ಥಿಯು 1989 ಕ್ಕಿಂತ ಮುಂಚಿತವಾಗಿ ಯು.ಜಿ.ಸಿ-ನೆಟ್ / ಸಿ.ಎಸ್.ಐ.ಆರ್-ನೆಟ್, ಜೆ.ಆರ್.ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಲ್ಲಿ ಅಂತಹವರಿಗೆ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.
ಇ) ಕೆಸೆಟ್ ಅಭ್ಯರ್ಥಿಗಳಿಗೆ 1ನೇ ಜೂನ್ 2002ಕ್ಕಿಂತ ಮೊದಲೇ ನಡೆಸಲಾದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳಿಗೂ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಅಂತಹ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗುತ್ತಾರೆ. ಆದರೆ 1ನೇ ಜೂನ್ 2002ರ ನಂತರ ಕೆಸೆಟ್‌ನಲ್ಲಿ ಅರ್ಹರಾದ ಅಭ್ಯರ್ಥಿಗಳು ಆಯಾ ರಾಜ್ಯಗಳ ವಿಶ್ವವಿದ್ಯಾನಿಲಯಗಳು / ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿರುತ್ತಾರೆ.
[V) ಪರೀಕ್ಷಾ ಶುಲ್ಕ ಮತ್ತು ಪಾವತಿಸುವ ವಿಧಾನ :
1) ಪರೀಕ್ಷಾ ಶುಲ್ಕ :
ವರ್ಗ
ಶುಲ್ಕ
, II-A, II-В, ІІІ-А, ІІІ-В ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ
0.1,000/-
ಪ್ರವರ್ಗ-I, SC, ST, PwD ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ
2
700.مه/-
2) ಶುಲ್ಕ ಪಾವತಿಸುವ ವಿಧಾನ :
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ಪ್ರವರ್ಗ-I, SC, ST, ತೃತೀಯ ಲಿಂಗ ಮತ್ತು ವಿಕಲಚೇತನರ (Medical Certificate with 40% or more disability ) .
ಸೂಚನೆ :
1. ಬೇರೆ ಯಾವುದೇ ವಿಧಾನದ ಮೂಲಕ ಶುಲ್ಕ ಪಾವತಿಸಲು ಅವಕಾಶವಿರುವುದಿಲ್ಲ (ಉದಾ : Money Order / Demand Draft / IPO Office Challan ಇತ್ಯಾದಿಗಳನ್ನು ಒಪ್ಪಲಾಗುವುದಿಲ್ಲ.
2. ಒಮ್ಮೆ ಶುಲ್ಕ ಪಾವತಿಸಿದ ನಂತರ ಅದನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
ಪರೀಕ್ಷಾ ಪಠ್ಯಕ್ರಮ
ಪತ್ರಿಕೆ - I : ಸಾಮಾನ್ಯ ಪತ್ರಿಕೆಯು ಅಭ್ಯರ್ಥಿಗಳ ಬೋಧನೆ, ಸಂಶೋಧನೆ ಮತ್ತು ಬುದ್ದಿ ಸಾಮರ್ಥ್ಯಗಳನ್ನು ಪರೀಕ್ಷಿಸುವುದಾಗಿರುತ್ತದೆ.
ಈ ಪತ್ರಿಕೆಯು ಆಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ, ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಸಾಮರ್ಥ್ಯವನ್ನು ಆಳೆಯುವಂತಹದ್ದಾಗಿರುತ್ತದೆ. ಈ ಪತ್ರಿಕೆಯು 50 ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ ಎರಡು ಅಂಕಗಳಿರುತ್ತದೆ. ಹಾಗೂ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಉತ್ತರಿಸಬೇಕಾಗಿರುತ್ತದೆ.
భక్తి-II: విజయ శ్రీకి
ಈ ಪತ್ರಿಕೆಯು ಅಭ್ಯರ್ಥಿಯ ಆಯ್ಕೆ ಮಾಡಿದ ವಿಷಯದ್ದಾಗಿರುತ್ತದೆ. ಈ ಪತ್ರಿಕೆಯು ಆಯ್ಕೆ ಮಾಡಿದ ವಿಷಯಗಳಲ್ಲಿ 100 ಕಡ್ಡಾಯ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೂ 2 ಅಂಕಗಳಿರುತ್ತದೆ. ಗರಿಷ್ಠ 200 ಅಂಕಗಳಿರುತ್ತವೆ.
ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಜೊತೆಗೆ ನೀಡುವ ಪೇಪರ್-1 ಮತ್ತು ಪೇಪರ್-II ರ ಒ.ಎಂ.ಆರ್. ಹಾಳೆಯಲ್ಲಿ ನಿಗದಿ ಪಡಿಸಿದ ನಮೂನೆಯಲ್ಲಿಯೇ ಉತ್ತರಗಳನ್ನು ಗುರುತಿಸಬೇಕು.
VII). ಕೆಸೆಟ್ ಪಠ್ಯಕ್ರಮ ಮತ್ತು ಪ್ರಶ್ನೆ ಪತ್ರಿಕೆ :
ಕೆಸೆಟ್ ಪಠ್ಯಕ್ರಮ : ಕೆಸೆಟ್ (KSET) ಪರೀಕ್ಷಾ ಪಠ್ಯಕ್ರಮವು, ಯು.ಜಿ.ಸಿ / ಸಿ.ಎಸ್.ಐ.ಆರ್ ನೆಟ್ ನಿಗದಿಪಡಿಸಿರುವ ಪಠ್ಯಕ್ರಮದ ಮಾದರಿಯಲ್ಲೇ ಇರುತ್ತದೆ. ಎಲ್ಲಾ ವಿಷಯಗಳ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಿಂದ (http://kea.kar.nic.in) Download ಪ್ರತ್ಯೇಕವಾಗಿ ಕಳುಹಿಸಲಾಗುವುದಿಲ್ಲ.
1. ಕನ್ನಡ ಮತ್ತು ಇಂಗ್ಲೀಷ್ ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳಲ್ಲಿ ಯಾವುದೇ ರೀತಿಯ ವ್ಯತ್ಯಾಸಗಳು ಕಂಡುಬಂದಲ್ಲಿ, ಇಂಗ್ಲೀಷ್ ಆವೃತ್ತಿಗಳಲ್ಲಿರುವುದೇ ಅಂತಿಮವೆಂದು ಪರಿಗಣಿಸಬೇಕು.
VIII) ವಿಷಯಗಳು :
ವಿಷಯ ಮತ್ತು ಕೆಸೆಟ್ ಪಠ್ಯಕ್ರಮ : ಪತ್ರಿಕೆ I ಮತ್ತು ಪತ್ರಿಕೆ - II ರಲ್ಲಿನ ಎಲ್ಲಾ ಪ್ರಶ್ನೆಗಳೂ ಕಡ್ಡಾಯವಾಗಿದ್ದು, ಪತ್ರಿಕೆ ಸಂಪೂರ್ಣ ಪಠ್ಯಕ್ರಮವನ್ನು (ಎಲ್ಲಾ ಎಲೆಕ್ಟಿವ್ ಗಳನ್ನು ಒಳಗೊಂಡಂತೆ) ಒಳಗೊಂಡಿರುತ್ತದೆ. ಎಲ್ಲಾ ಕೆಸೆಟ್ ವಿಷಯಗಳ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂತರ್ಜಾಲದಲ್ಲಿ (http://kea.kar.nic.in) ಡೌನ್‌ಲೋಡ್ ಮಾಡಿಕೊಳ್ಳಬಹುದು. ಕೆಸೆಟ್ ಪರೀಕ್ಷೆಯು 41 ವಿಷಯಗಳಿಗೆ ನಡೆಯಲಿದ್ದು, 41 ವಿಷಯಗಳ ಹೆಸರು, ವಿಷಯಗಳ ಕೋಡ್ ಮತ್ತು ಪ್ರಶ್ನೆ ಪತ್ರಿಕೆಯ ಆವೃತ್ತಿಯ ವಿವರಗಳು ಈ ಕೆಳಕಂಡಂತಿರುತ್ತವೆ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಕೆಸೆಟ್ 2024ಕ್ಕೆ ಪರೀಕ್ಷೆ ಬರೆಯಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅನಾನುಕೂಲತೆ ಅಥವಾ ಕೊನೆಯ ನಿಮಿಷದ ತೊಂದರೆಗಳ ಅಥವಾ ಅನಿರೀಕ್ಷಿತ
ತೊಂದರೆಗಳನ್ನು ತಪ್ಪಿಸಲು, ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕಾಗಿ ಕಾಯದೆ ಮುಂಚಿತವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ
ಸೂಚಿಸಲಾಗಿದೆ. ಕೊನೆಯ ದಿನಾಂಕದಂದು ಆಗುಹೋಗುವ ಯಾವುದೇ ರೀತಿಯ ತೊಂದರೆಗಳಿಗೆ ಕೆಇಎ ಜವಬ್ದಾರಿಯಾಗಿರುವುದಿಲ್ಲ.
ಅಭ್ಯರ್ಥಿಗಳು ನಿಗಧಿತ ವಿವರಗಳೊಂದಿಗೆ ಈ ಕೆಳಗಿನಂತೆ ನೊಂದಾಯಿಸತಕ್ಕದ್ದು (ಅಭ್ಯರ್ಥಿಯ ವಿವರಗಳು, ವಿಧ್ಯಾಬ್ಯಾಸ ಮತ್ತು ಕೆಸೆಟ್-2024 ಪರೀಕ್ಷೆಯ ವಿವರಗಳು) ಮುಂದುವರೆಸುತ್ತಾ ಅಭ್ಯರ್ಥಿಗಳು ವಿದ್ಯಾರ್ಹತೆಯ ಕುರಿತಂತೆ ತಾವು ಪಿ.ಜಿ ಕೋರ್ಸ್ ಅನ್ನು ಉತ್ತೀರ್ಣರಾಗಿರುವ ಬಗ್ಗೆ ಅಥವಾ ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ಬಗ್ಗೆ ಮಾಹಿತಿ ಸಲ್ಲಿಸುವುದು.
ಸೂಚನೆ :
1. ಅಭ್ಯರ್ಥಿಗಳು ಕೆಸೆಟ್-2024ರ ಅಂತಿಮವಾಗಿ ಭರ್ತಿಮಾಡಿದ ಮುದ್ರಿತ ಪ್ರತಿಗಳನ್ನು ಸಂರಕ್ಷಿಸಿಕೊಳ್ಳುವುದು. ಸದರಿ ಮುದ್ರಿತ ಪ್ರತಿಗಳನ್ನು ಅವಶ್ಯಕತೆಗನುಗುಣವಾಗಿ ಸಲ್ಲಿಸುವುದು.
2. ಎಲ್ಲಾ ಸ್ಕ್ಯಾನ್ ಮಾಡಿದ ಪ್ರತಿಗಳು JPEG ಸ್ವರೂಪದಲ್ಲಿರಬೇಕು. ಆನ್‌ಲೈನ್ ಅಪ್ಲಿಕೇಷನ್ ವ್ಯವಸ್ಥೆಯು ನಿರ್ಧಿಷ್ಟಪಡಿಸಿದ ಗಾತ್ರಗಳಿಗಿಂತ ಚಿಕ್ಕದಾದ / ದೊಡ್ಡದಾದ ಫೈಲ್‌ಗಳನ್ನು ಅಪ್ ಲೋಡ್ ಮಾಡಲು ಅನುಮತಿಸುವುದಿಲ್ಲ.)
ಅ) ಕೆಸೆಟ್-2024 ಪರೀಕ್ಷೆಗೆ ನಿಗಧಿಪಡಿಸಲಾದ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸತಕ್ಕದ್ದು.
ಆ) ಪ್ರವೇಶ ಪತ್ರವನ್ನು ಕೆಇಎ ಅಂತರ್ಜಾಲದ ಮೂಲಕವೇ ಡೌನ್‌ಲೋಡ್ ಮಾಡತಕ್ಕದ್ದು, ಪ್ರದೇಶ ಪತ್ರದ ಕಾಯಂ ಪ್ರತಿ (Hard Copy) ಯನ್ನು ಕೆಇಎ ಇಂದ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ತಪ್ಪದೇ ಮಾನ್ಯವಾದ ಭಾವಚಿತ್ರವಿರುವ ಗುರುತಿನ ಪುರಾವೆಯನ್ನು ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗತಕ್ಕದ್ದು.
No comments:
Post a Comment
If You Have any Doubts, let me Comment Here