Minority Students IAS KAS FREE Coaching 2024
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ & ಪಾರ್ಸಿ ಸಮುದಾಯದ Degree ಪಾಸಾದ ವಿದ್ಯಾರ್ಥಿಗಳಿಗಾಗಿ KAS / IAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
⚫ ಅರ್ಜಿ ಸಲ್ಲಿಸುವ ಅವಧಿ: 24-07-2024 ರಿಂದ 31-08-2024
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲು ಉದ್ದೇಶಿಸಲಾಗಿದೆ.
ಮುಂದುವರೆದು 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರಿಕ್ಷೇಗಳ ತರಬೇತಿಗೆ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.
ಆದ್ದರಿಂದ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಸಲ್ಲಿಸಲು ಸೇವಾಸಿಂಧು ಪೋರ್ಟಲ್ (www.sevasindhu.karnataka.gov.in) ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆಗಳ ಕುರಿತಾದ ವಿವರವನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು. ಸದರಿ ವಿಷಯದ ಮಾಹಿತಿ ಕುರಿತು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಅಲ್ಪಸಂಖ್ಯಾತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕ್ರಮವಹಿಸುವಂತೆ ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ www.dom.karnataka.gov.in ರಲ್ಲಿ "2024-25ನೇ ಸಾಲಿನ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ" (ಕ್ಲಿಕ್ ಮಾಡಿ). ಸಹಾಯವಾಣಿ ಸಂಖ್ಯೆ:8277799990 ಕರೆಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 24.07.2024 ರಿಂದ 31.08.2024 ರವರೆಗೆ
No comments:
Post a Comment
If You Have any Doubts, let me Comment Here