press note Regarding 2023-2024 Gazetted Probationers Notification Dated-26-02-2024is published
ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪರೀಕ್ಷೆಯ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದೆ.
ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳಿಗೆ ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 509/ಇ(1)/2023-24, ದಿನಾಂಕ:26-02-2024ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ದಿನಾಂಕ:30-07-2024ರ ಆಯೋಗದ ಸಭೆಯಲ್ಲಿ ಚರ್ಚಿಸಲಾಗಿ, ದಿನಾಂಕ:25-08-2024ರಂದು ನಿಗದಿಪಡಿಸಿರುವ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ರೀತಿಯ ಪರೀಕ್ಷಾ ಪೂರ್ವ ಸಿದ್ಧತೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕದಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲವೆಂದು ತೀರ್ಮಾನಿಸಲಾಗಿದೆ ಎಂದು ಈ ಮೂಲಕ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
No comments:
Post a Comment
If You Have any Doubts, let me Comment Here