Regarding the provision of free electricity facility to all government primary and secondary schools in the state.
ರಾಜ್ಯ ಸರ್ಕಾರದಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಒದಗಿಸುವುದಾಗಿ ಘೋಷಣೆ ಮಾಡಲಾಗಿತ್ತು. ಅದರಂತೆ 46,829 ಶಾಲೆ, 1234 ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುತ್ತಿರುವುದಾಗಿ ತಿಳಿಸಿದೆ.
ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.
ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು 2024-25ನೇ ಸಾಲಿನ ಬಜೆಟ್ ಘೋಷಣೆಯ ಭಾಗವಾಗಿ ಉಚಿತವಾಗಿ ವಿದ್ಯುತ್ ಸೌಲಭ್ಯ ಕಲ್ಪಿಸಲು ₹25 ಕೋಟಿ ಅನುದಾನ ನೀಡಲಾಗಿದೆ.
ಎಲ್ಲ ಶಾಲೆಗಳು ಆಯಾ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಯ ಕಚೇರಿಗಳಿಗೆ ಆರ್‌ಆರ್ ಸಂಖ್ಯೆ ಹಾಗೂ ಬಳಕೆದಾರರ ಐಡಿಗಳನ್ನು ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
No comments:
Post a Comment
If You Have any Doubts, let me Comment Here