Teachers Recruitment Updates 2024
ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಾಥಮಿಕ ಮತ್ತು ಶಾಲೆಗಳಲ್ಲಿ 19 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಹಾಗೂ ಈ ಭಾಗದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು 371 (ಜಿ) ಅಡಿಯಲ್ಲಿ ಹುದ್ದೆ ಭರ್ತಿ ಮಾಡಲು ಕ್ರಮಕೈಗೊಳ ಕಾರಣಗಳೇನು ಎಂದು ಡಾ: ತಳವಾರ್ ಸಾಬಣ್ಣ (ನಾಮನಿರ್ದೇಶನ ಹೊಂದಿದವರು) ದಿನಾಂಕ 15-07-2024ರಂದು ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಉತ್ತರ ಇಲ್ಲಿದೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶವೂ ಸೇರಿದಂತೆ ಪ್ರಾಥಮಿಕ ಶಾಲೆಗಳಿಗೆ 7500 ಹಾಗೂ ಪ್ರೌಢ ಶಾಲೆಗಳಿಗೆ 2500 ಒಟ್ಟಾರೆ 10000 ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಲು ಆರ್ಥಿಕ ಇಲಾಖೆಯ ಸಹಮತಿ ಕೋರಲಾಗಿರುತ್ತದೆ.
2022-23ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 07 ಜಿಲ್ಲೆಗಳಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ಯ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ವೃಂದದ 5000 ಹುದ್ದೆಗಳ ಭರ್ತಿಗೆ ದಿನಾಂಕ 21.02.2022 ರಂದು ಅಧಿಸೂಚಿಸಲಾಗಿತ್ತು. ಈ ಹುದ್ದೆಗಳಿಗೆ ಎದುರಾಗಿ 4193 ಅಭ್ಯರ್ಥಿಗಳು ಅರ್ಹರಾಗಿದ್ದು, ಈ ಪೈಕಿ 3902 ಅಭ್ಯರ್ಥಿಗಳು ಕೌನ್ಸಿಲಿಂಗ್ ಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಂಡಿರುತ್ತಾರೆ ಮತ್ತು 3504 ಅಭ್ಯರ್ಥಿಗಳು ಈಗಾಗಲೇ ಶಾಲಾ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.
ಕಲ್ಯಾಣ ಕರ್ನಾಟಕ ಪ್ರದೇಶವೂ ಸೇರಿದಂತೆ ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರತಿ ವರ್ಷದಂತೆ ಪ್ರಸ್ತುತ ಸಾಲಿನಲ್ಲಿಯೂ ಸಹ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ 42,817 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮವಹಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here