Circular Regarding School Dropped Children's
2023-24ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ, ಶಾಲೆಗೆ ಹಾಜರಾಗಲು ನಗರ ಸ್ಥಳೀಯ ಸಂಸ್ಥೆಗಳು (ಬಿಬಿಎಂಪಿ ಒಳಗೊಂಡಂತೆ) ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ.
ಶಾಲೆಯಿಂದ ಹೊರಗುಳಿದ ಮಕ್ಕಳ ಮನೆ-ಮನೆ ಸಮೀಕ್ಷೆ ಮಾಡುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಿರುತ್ತದೆ ಎಂದು ಮಾನ್ಯ ಉಚ್ಚ ನ್ಯಾಯಾಲಯವು ಆದೇಶಿಸಿರುವ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಹಾಗೂ ಶಾಲೆಗೆ ದಾಖಲಾಗದ ಮಕ್ಕಳ ಬಗ್ಗೆ ಮಾನ್ಯ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆಯನ್ನು ಗುರುತಿಸುವುದು ಅವಶ್ಯಕವಾಗಿದೆ.
ಭಾರತ ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ಮುಖ್ಯ ವಾಹಿನಿಗೆ ತರಲು The Karnataka Right of Children to Free and Compulsory Education Rules, 2012 ರನ್ನಯ ಸ್ಥಳೀಯ ಸಂಸ್ಥೆಗಳು ಶಿಕ್ಷಣ ರಿಜಿಸ್ಟರ್ ಅನ್ನು ನಿರ್ವಹಿಸಬೇಕಾಗಿರುತ್ತದೆ. The Karnataka Right of Children to Free and Compulsory Education (Amendment) Rules, 2014 ರನ್ನಯ ಮಕ್ಕಳ ಹಾಜರಾತಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಲಾಗಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ರಿಟ್ ಅರ್ಜಿ ಸಂಖ್ಯೆ: 15768/2013ಗೆ ಸಂಬಂಧಿಸಿದಂತೆ ಶಾಲೆಯಿಂದ ಹೊರಗುಳಿದ ಮಕ್ಕಳ ಮನೆ-ಮನೆ ಸಮೀಕ್ಷೆ ಮಾಡುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಿರುತ್ತದೆ ಎಂದು ಮಾನ್ಯ ಉಚ್ಚ ನ್ಯಾಯಾಲಯವು ಆದೇಶಿಸಿರುವ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಹಾಗೂ ಶಾಲೆಗೆ ದಾಖಲಾಗದ ಮಕ್ಕಳ ಬಗ್ಗೆ ಮಾನ್ಯ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆಯನ್ನು ಗುರುತಿಸುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ, ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖಾ (EDCS) ವತಿಯಿಂದ ಅಭಿವೃದ್ಧಿಪಡಿಸಿದ "Karnataka H2H Children Survey App ಬಳಸಿಕೊಂಡು ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಕೈಗೊಳ್ಳುವ ಕುರಿತಾಗಿ ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸುತ್ತೋಲೆಯಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿರುತ್ತದೆ.
ದಿನಾಂಕ: 30-05-2024 ರಂದು ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಇಲಾಖೆರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಂತೆ mobile app ನಲ್ಲಿ ಸೂಕ್ತ ತಿದ್ದುಪಡಿಗಳನ್ನು ಮಾಡಿ, ದಿನಾಂಕ: 03-07-2024 ರಂದು ನವೀಕೃತ ಮೊಬೈಲ್ app ನ ಬಳಕೆಯ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳ ನೋಡಲ್ ಅಧಿಕಾರಿಗಳಿಗೆ ಹಾಗೂ ಮಾಸ್ಟರ್ ಟೈನರ್‌ಗಳಿಗೆ ತರಬೇತಿಯನ್ನು ನೀಡಲಾಗಿರುತ್ತದೆ. ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮೀಕ್ಷೆದಾರರನ್ನು ಗುರುತಿಸಿ ಅವರಿಗೆ ಮಾಸ್ಟರ್ ಟ್ರೈನರ್‌ಗಳ ಮುಖಾಂತರ ತರಬೇತಿ ನೀಡತಕ್ಕದ್ದು.
ಈ ಸಮೀಕ್ಷೆಯನ್ನು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ (ಬಿಬಿಎಂಪಿ ಒಳಗೊಂಡಂತೆ) ನಡೆಸಲು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಈ ಕೆಳಗಿನಂತೆ ಕ್ರಮಗಳನ್ನು ಅನುಸರಿಸುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here