CM Important Notice to Government Employees
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ.
ರಾಜ್ಯ ಸರ್ಕಾರಿ ನೌಕರರು ಮನವಿ ಸಲ್ಲಿಸುವ ಸಂಬಂಧ ನಿಯಮಗಳನ್ನು ಮೀರುತ್ತಿದ್ದಾರೆ. ಇನ್ಮುಂದೆ ಅದಕ್ಕೆ ಅವಕಾಶವಿಲ್ಲ. ನಿಯಮಾನುಸಾರ ಮನವಿಗಳನ್ನು ಸಂಬಂಧಿಸಿದವರಿಗೆ ಸಲ್ಲಿಸಬೇಕು.
ಸೂಚನೆಗಳನ್ನು ಮೀರಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.
ನೋಟಿಸ್‌ನಲ್ಲಿ ಏನಿದೆ..?: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ಸರ್ಕಾರಿ ಆದೇಶ ಸಂಖ್ಯೆ: ಜಿಎಡಿ, ಎಆರ್ ಆರ್ 64, ದಿನಾಂಕ: 29.08.1966ರಲ್ಲಿ ಸರ್ಕಾರಿ ನೌಕರರು, ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಯವರಿಗೆ ಸಲ್ಲಿಸುವಂತೆ ಮತ್ತು ಇಲಾಖಾ ಸಚಿವರಿಗೆ ನೇರವಾಗಿ ಸಲ್ಲಿಸದಿರುವಂತೆ ಹಾಗೂ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ: ಡಿಪಿಎಆರ್ 11 ಎಸ್ ಸಿ 80, ದಿನಾಂಕ: 21.05.1980 ರಲ್ಲಿ ಸರ್ಕಾರಿ ನೌಕರರು ತಮ್ಮ ಸೇವಾ ವಿಷಯಗಳ ಬಗ್ಗೆ ರಾಜಕೀಯ ಅಥವಾ ಇನ್ನಿತರೆ ಪ್ರಭಾವವನ್ನು ಬೀರದಿರುವ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದಿದ್ದಾರೆ.
ಆದಾಗ್ಯೂ, ಕೆಲವು ಸರ್ಕಾರಿ ನೌಕರರು ಸದರಿ ಸೂಚನೆಗಳನ್ನು ಪಾಲಿಸದ ತಮ್ಮ ವರ್ಗಾವಣೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರಿಗೆ ಸಚಿವರಿಗೆ ಶಾಸಕರಿಗೆ ನೇರವಾಗಿ ಮನವಿಗಳನ್ನು ಸಲ್ಲಿಸುತ್ತಿರುವುದು ರಾಜಕೀಯ ಪುಭಾವ ಬೀರುತ್ತಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಮೇಲ್ಕಂಡ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲು ಹಾಗೂ ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದ್ದಾರೆ.
No comments:
Post a Comment
If You Have any Doubts, let me Comment Here