GFGC Principal Document Verification 2022
ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಸಲ್ಲಿಸಿರುವ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸುವ ಬಗ್ಗೆ.
ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ಮತ್ತು ತಿದ್ದುಪಡಿ ನಿಯಮಗಳು 2022 ರನ್ವಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, 310 ಪ್ರಾಂಶುಪಾಲರ ಹುದ್ದೆಗಳಿಗೆ ನಿಯಮಾನುಸಾರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಸಲ್ಲಿಸಲು ಉಲ್ಲೇಖ-(2) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಸದರಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ 141 ಸ್ಥಳೀಯ ವೃಂದದ (ಕ.ಕ) ಹಾಗೂ 813 ಉಳಿಕೆ ಮೂಲ ವೃಂದದ (ನಾನ್ ಹೆಚ್.ಕೆ) ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಿದ್ದು, ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ರ ನಿಯಮ 4 ರನ್ನಯ ಕಾಲೇಜು ಶಿಕ್ಷಣ ಆಯುಕ್ತರ ಅಧ್ಯಕ್ಷತೆಯಲ್ಲಿನ ಆಯ್ಕೆ ಪ್ರಾಧಿಕಾರವು ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಶೈಕ್ಷಣಿಕ / ಮೀಸಲಾತಿ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ಸಲ್ಲಿಸುವಂತೆ ಉಲ್ಲೇಖ-(2) ರ ಸರ್ಕಾರದ ಪತ್ರದಲ್ಲಿ ಸೂಚಿಸಲಾಗಿರುತ್ತದೆ. (ಅಭ್ಯರ್ಥಿಗಳ ಮೆರಿಟ್ ಪಟ್ಟಿ ಲಗತ್ತಿಸಿದೆ)
ಅದರಂತೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಸಲ್ಲಿಸಿರುವ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳ ನೇಮಕಾತಿ ಅರ್ಹತೆ ಸಂಬಂದ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದಾಖಲಾತಿಗಳ ಪರಿಶೀಲನೆಯನ್ನು ನಡೆಸಬೇಕಾಗಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕ:06-02-2023 ರೊಳಗಾಗಿ ಪಡೆದಿಟ್ಟುಕೊಂಡಿರುವ ದೃಢೀಕೃತ ದಾಖಲಾತಿಗಳನ್ನು ದಿನಾಂಕ:28.08.2024 ರೊಳಗಾಗಿ ಕಾಲೇಜು ಶಿಕ್ಷಣ ಆಯುಕ್ತರ ಕಛೇರಿ, ಉನ್ನತ ಶಿಕ್ಷಣ ಸೌಧ, ಶೇಷಾದ್ರಿ ರಸ್ತೆ, ಬೆಂಗಳೂರು- 560001 ಇಲ್ಲಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ದಿನಾಂಕ:28.08.2024 ರ ನಂತರ ಸಲ್ಲಿಸಲಾಗುವ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
No comments:
Post a Comment
If You Have any Doubts, let me Comment Here