JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, August 3, 2024

Health Department Vacancies Details

  Jnyanabhandar       Saturday, August 3, 2024
Health Department Vacancies Details 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಒಟ್ಟು 34,967 ಮಂಜೂರಾತಿ ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಹಂತಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಸರ್ಕಾರದ ಹೇಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಹೇಳಿಕೆಯಲ್ಲಿ ಏನಿದೆ?:
'ವೈದ್ಯಾಧಿಕಾರಿಗಳು, ತಜ್ಞರು, ದಂತ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ, ನರ್ಸಿಂಗ್ ಅಧಿಕಾರಿಗಳು ಹಾಗೂ ಡಿ ಗ್ರೂಪ್ ನೌಕರರೂ ಸೇರಿದಂತೆ ಆರೋಗ್ಯ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಒಟ್ಟು ಸಂಖ್ಯೆ 34,967ರಷ್ಟಿದ್ದು, ಇದರಲ್ಲಿ 20,444 ಹುದ್ದೆಗಳು ಭರ್ತಿಯಾಗಿವೆ ಎಂದು ತಿಳಿಸಲಾಗಿದೆ.

'ಒಟ್ಟು 14,523 ಹುದ್ದೆಗಳು ಖಾಲಿ ಇದ್ದು, ಹೊರಗುತ್ತಿಗೆ, ಸರ್ಕಾರಿ ಗುತ್ತಿಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ 16,501 ಹುದ್ದೆಗಳ ಕಾರ್ಯ ನಿರ್ವಹಣೆಯಾಗುತ್ತಿದೆ. ಗ್ರಾಮೀಣ ಕಡ್ಡಾಯ ಸೇವೆಯಡಿ 2,371 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. 204 ಕಿರಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. 413 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. 498 ಫಾರ್ಮಸಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 705 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಖಾಲಿ ಇರುವ 10,253 ಡಿ ಗ್ರೂಪ್ ಹುದ್ದೆಗಳಲ್ಲಿ ಶೇ 75ರಷ್ಟು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ' ಎಂದು ವಿವರಿಸಲಾಗಿದೆ.

ಸರ್ಕಾರದ ಹೇಳಿಕೆಗೆ ಪ್ರತಿಯಾಗಿ ಪ್ರಕರಣದ ಅಮಿಕಸ್‌ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ಶ್ರೀಧರ ಪ್ರಭು, 'ಸರ್ಕಾರ 2,371 ವೈದ್ಯರು ಗ್ರಾಮೀಣ ಕಡ್ಡಾಯ ಸೇವೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದೆ. ಆದರೆ, ಗ್ರಾಮೀಣ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಿ ಇದಕ್ಕೆ ಸಂಬಂಧಿಸಿದಂತೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದು ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವೈದ್ಯಕೀಯ ಸೇವೆಯ ಮೇಲೆ ಪರಿಣಾಮ ಬೀರಲಿದೆ' ಎಂದರು.
'ಗ್ರಾಮೀಣ ಪ್ರದೇಶಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿ ಗ್ರೂಪ್ ನೌಕರರ ಸೇವೆ ಅತ್ಯಂತ ಅವಶ್ಯಕ. ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿವೆ. ವೈದ್ಯರು, ತಜ್ಞ ವೈದ್ಯರು, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇದ್ದು, ಈ ಅಂಶಗಳನ್ನು ನ್ಯಾಯಾಲಯ ಪರಿಗಣಿಸಬೇಕು' ಎಂದು ಮನವಿ ಮಾಡಿದರು. ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿದೆ.


logoblog

Thanks for reading Health Department Vacancies Details

Previous
« Prev Post

No comments:

Post a Comment

If You Have any Doubts, let me Comment Here