JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, August 8, 2024

Official order from Govt to fill up vacant teaching posts in aided schools

  Jnyanabhandar       Thursday, August 8, 2024
Official order from Govt to fill up vacant teaching posts in aided schools.

ದಿನಾಂಕ 1-1-2016 ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರದಿಂದ ಅಧಿಕೃತ ಆದೇಶ.

ರಾಜ್ಯ ಸರ್ಕಾರದಿಂದ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮತಿಸಿ ಆದೇಶಿಸಿದೆ. ಈ ಮೂಲಕ ಅನುದಾನಿತ ಶಾಲಾ ಶಿಕ್ಷಕರು, ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ.

ದಿನಾಂಕ:31-03-2008 ರಲ್ಲಿ, ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07- 2008 ರ ನಂತರ ನಿಧನ, ನಿವೃತ್ತಿ, ರಾಜಿನಾಮೆ, ಸಕ್ಷಮ ಪ್ರಾಧಿಕಾರದಿಂದ ಅನುಮೋದಿತವಾದ ಬಡ್ತಿ ಮೂಲಕ ತೆರವಾದ ಮತ್ತು ಇತರ ಕಾರಣಗಳಿಂದ ತೆರವಾದ ಬೋಧಕ ಹುದ್ದೆಗಳನ್ನು ತುಂಬಲು ಷರತ್ತುಗಳಿಗೊಳಪಟ್ಟು ಆರ್ಥಿಕ ಮಿತವ್ಯಯ ಆದೇಶವನ್ನು ಸಡಿಲಿಸಿ, ಅನುಮತಿ ನೀಡಲಾಗಿತ್ತು.

ಮೇಲೆ ಓದಲಾದ ಕ್ರಮಾಂಕ (2) ರಲ್ಲಿ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಸೂಕ್ತ ಪ್ರಾಧಿಕಾರದ ಅನುಮೋದನೆ ಪಡೆದು ಬಡ್ತಿ ಹೊಂದಿರುವ ಹಾಗೂ ಇತರೆ ಕಾರಣಗಳಿಂದ ದಿನಾಂಕ:31.12.2012 ರವರೆಗೆ ಖಾಲಿಯಾದ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡು ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು ಹಾಗೂ 2:01.01.2013 D๐๘ 31.12.2014 di mare 01.01.2015 50

31.12.2015 ರವರೆಗೆ ಖಾಲಿಯಾದ ಬೋಧಕ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡ ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು (ವ್ಯತ್ತಿ / ಚಿತ್ರಕಲಾ / ಸಂಗೀತ ಹಾಗೂ ಮುಂತಾದ ವಿಶೇಷ ಶಿಕ್ಷಕರನ್ನು ಹೊರತುಪಡಿಸಿ) ಭರ್ತಿ ಮಾಡುವ ಷರತ್ತಿಗೊಳಪಟ್ಟು ಆರ್ಥಿಕ ಮಿತ್ಯವ್ಯಯ ಸಡಿಲಿಸಿ ಅನುಮತಿ ನೀಡಲಾಗಿತ್ತು.

ಮೇಲೆ ಓದಲಾದ ಕ್ರಮಾಂಕ (3), (4) ಮತ್ತು (5) ರನ್ವಯ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಖಾಲಿ ಇರುವ ಬೋಧಕ ಹುದ್ದೆಗಳನ್ನು ಆರ್ಥಿಕ ಮಿತವ್ಯಯ ಸಡಿಲಿಸಿ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಮತ್ತು ಧಾರವಾಡ ಹಾಗೂ ನಿರ್ದೇಶಕರು [ಪ್ರೌಢ], ಬೆಂಗಳೂರು ರವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಅದರಂತೆ ಈ ಕೆಳಕಂಡಂತೆ ಆದೇಶಿಸಿದೆ.


ಆದೇಶ ಪ್ರತಿಯನ್ನು ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ.

logoblog

Thanks for reading Official order from Govt to fill up vacant teaching posts in aided schools

Previous
« Prev Post

No comments:

Post a Comment

If You Have any Doubts, let me Comment Here