Circular on tagging of red yellow identity card neck string by all government employees under the campaign known as ``Karnataka Usiragali Kannada'' campaign.
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ" ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳು ದಾರವನ್ನು ಟ್ಯಾಗ್ ಹಾಕಿಕೊಳ್ಳುವುದರ ಕುರಿತು ಸುತ್ತೋಲೆ.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದೆ.
ನೂತನ ಕೊರಳುದಾರದ ವಿನ್ಯಾಸವನ್ನು Click Here To Download Card Model ಆನ್‌ಲೈನ್ ವಿಳಾಸದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.
No comments:
Post a Comment
If You Have any Doubts, let me Comment Here