BMTC Conductor Final Score 2024
ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.
ಸೆ.1ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಸೆ.2ರಂದು ಕೀ ಉತ್ತರಗಳನ್ನು ಪ್ರಕಟಿಸಿ ಸೆ.5ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ ವಿಷಯ ತಜ್ಞರ ಸಮಿತಿಯ ಶಿಾರಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ಸೆ.11ರಂದು ಪ್ರಕಟಿಸಲಾಗಿತ್ತು. ತಾತ್ಕಾಲಿಕ ಅಂಕಗಳಿಗೆ ಆಕ್ಷೇಪಣೆ ಸಲ್ಲಿಸಲು ಸೆ.18ರವರೆಗೆ ಅವಕಾಶ ನೀಡಲಾಗಿತ್ತು. ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಂಕಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳ ಅಂಕದ ವಿವರಗಳನ್ನು ಸಂಬಂಧಪಟ್ಟ ಸಂಸ್ಥೆಗೆ ಹಸ್ತಾಂತರಿಸಲಾಗುವುದು. ಆ ಸಂಸ್ಥೆಯು ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಿದ್ದಾರೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತಿಮ ಅಂಕಗಳನ್ನು ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here