Regarding publication of First Provisional Selection List for the recruitment of Armed Police Constable (DAR) (Male and Third Gender Male) posts.
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 40 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಡಿಎಆರ್) (ಪುರುಷ ಮತ್ತು ತೃತೀಯಲಿಂಗ ಪುರುಷ) ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ ತಿದ್ದುಪಡಿ ನಿಯಮ 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2016, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲ ಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಅರ್ಹ ಅಭ್ಯರ್ಥಿಗಳಿಂದ ಉಲ್ಲೇಖ(1)ರ ಅಧಿಸೂಚನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಅದರನ್ವಯ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ: 28-01-2024 ರಂದು ಇಲಾಖೆಯಿಂದ ವಸ್ತುನಿಷ್ಟ ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಸದರಿ ವಸ್ತುನಿಷ್ಟ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಧಿಸೂಚಿತ ಹುದ್ದೆಗಳಿಗೆ 1:5 ರ ಅನುಪಾತದಲ್ಲಿ ಅರ್ಹತೆ ಪಡೆದ ಒಟ್ಟು 200 ಅಭ್ಯರ್ಥಿಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ದಿನಾಂಕ: 05-08-2024 ರಂದು ದೇಹದಾರ್ಡ್ಯತೆ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗಿರುತ್ತದೆ. ಸದರಿ ಪರೀಕ್ಷೆಗಳಿಗೆ ಹಾಜರಾಗಿ ಅರ್ಹತೆ ಪಡೆದ ಮತ್ತು ನಿಯಮಾನುಸಾರ ವಸ್ತುನಿಷ್ಟ ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಪರಿಗಣನೆಗೆ ತೆಗೆದುಕೊಂಡು, ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಈ ಕೆಳಕಂಡ ಷರತ್ತು ಮತ್ತು ನಿಬಂಧನೆಗಳಿಗೊಳ ಪಟ್ಟು ಈ ಕೆಳಕಂಡಂತೆ 1:1 ಅನುಪಾತದಲ್ಲಿ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here