KEA Upcoming Exam Time Table 2024
ವಿವಿಧ ಕಾರಣಗಳಿಂದಾಗಿ ಕೆಇಎಯಿಂದ ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ಪಿಎಸ್‌ಐ ಪರೀಕ್ಷೆ ಸೇರಿದಂತೆ ವಿವಿಧ ನೇಮಕಾತಿಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
PSI ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಅಕ್ಟೋಬರ್.3, 2024ರಂದು ನಡೆಯಲಿದೆ. ವಯೋಮಿತಿ ಸಡಿಲ ಮಾಡಿರುವ ಕಾರಣ VAO ಮತ್ತು GTTC ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ಹೀಗಿದೆ ಪಿಎಸ್‌ಐ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ( PSI Recruitment Exam )
ದಿನಾಂಕ 03-10-2024ರಂದು ಬೆಳಿಗ್ಗೆ 10.30ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 12.30ರಿಂದ 2 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಇಲ್ಲಿದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ
ದಿನಾಂಕ 29-09-2024ರ ಭಾನುವಾರದಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗಿ ಅರ್ಹತೆಗಳಿಸಿದ್ದಲ್ಲಿ ಮಾತ್ರ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
ದಿನಾಂಕ 26-10-2024ರ ಶನಿವಾರದಂದು ಜಿಟಿಟಿಸಿಯ ವಿವಿಧ ಹುದ್ದೆಗಳಿಗೆ ಮಧ್ಯಾಹ್ನ 2.30ರಿಂದ 4.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ವಯೋಮಿತಿ ಸಡಿಲಿಕೆಯಿಂದ ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರವೇ ಈ ಪರೀಕ್ಷೆ ನಡೆಸಲಾಗುತ್ತಿದೆ.
ಹೀಗಿದೆ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ ವೇಳಾಪಟ್ಟಿ
ದಿನಾಂಕ 27-10-2024ರಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಪತ್ರಿಕೆ-1, ಮಧ್ಯಾಹ್ನ 2.30ರಿಂದ 4.30ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಇಲ್ಲಿದೆ ಕೆಸೆಟ್ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ( KSET Exam 2024)
ದಿನಾಂಕ 24-11-2024ರಂದು ಬೆಳಿಗ್ಗೆ 10 ರಿಂದ 1 ಗಟೆಯವರೆಗೆ ಪತ್ರಿಕೆ 1 ಮತ್ತು 2ರ ಪರೀಕ್ಷೆ ನಡೆಯಲಿದೆ.
ಹೀಗಿದೆ ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾ ವೇಳಾಪಟ್ಟಿ
ದಿನಾಂಕ 24-11-2024ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಪತ್ರಿಕೆ-2 ಹಾಗೂ 3 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ.
ಅಧಿಕೃತ ವೇಳಾಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here