Minority Pre Matric Scholarship 2024
2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ (1ರಿಂದ 8ನೇ ತರಗತಿ)
ಆನ್‌ಲೈನ್ ಅರ್ಜಿ
2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ (1ರಿಂದ 8ನೇ ತರಗತಿ) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‌ಲೈನ್ ಅರ್ಜಿಗಾಗಿ ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ
(ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ - SSP) https://dom.karnataka.gov.in (ಅಲ್ಪಸಂಖ್ಯಾತರ ನಿರ್ದೇಶನಾಲಯ, ಕರ್ನಾಟಕ ಸರ್ಕಾರ)
ಸಮಯಾವಕಾಶ
ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಪ್ರಾರಂಭ ದಿನಾಂಕ:
29.08.2024.
ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ: 31.10.2024.
ವಿದ್ಯಾರ್ಥಿ ವೇತನ ಜಮೆ ಆಗಿದೆಯಾ ಎಂದು ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಅರ್ಹತೆ
ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ
ಆದಾಯವು ರೂ.1.00 ಲಕ್ಷಗಳನ್ನು ಮೀರಿರಬಾರದು.
ವಿಶೇಷ ಸೂಚನೆ:
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಕಳೆದ ವರ್ಷದಲ್ಲಿ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು Auto Renewal ಎಂದು ಪರಿಗಣಿಸಲಾಗುವುದರಿಂದ ಸದರಿ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.
ಹಿಂದಿನ ವರ್ಷ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸತಕ್ಕದ್ದು.
ಸದರಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್
ವಿದ್ಯಾರ್ಥಿ ವೇತನ ಜಮೆ ಆಗಿದೆಯಾ ಎಂದು ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping Active ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: https://dom.karnataka.gov.in , ಅನ್ನು ವೀಕ್ಷಿಸಿ, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಿ.
ವಿದ್ಯಾರ್ಥಿ ವೇತನ ಜಮೆ ಆಗಿದೆಯಾ ಎಂದು ತಿಳಿಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
No comments:
Post a Comment
If You Have any Doubts, let me Comment Here