Date extension for online application for NMMS examination.
NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 05.09.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:20.09.2024 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ), ಸಂಬಂಧಿಸಿದ ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ಮಾಹಿತಿಯನ್ನು ನೀಡುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.
No comments:
Post a Comment
If You Have any Doubts, let me Comment Here