Reading campaign to enhance reading skills in all government and aided primary schools
ಇಂದಿನ ಓದುಗರು ನಾಳಿನ ನಾಯಕರು" ಎಂಬ ಗಾದೆ ಮಾತಿನಂತೆ ಮಕ್ಕಳಲ್ಲಿ ಓದುವ ಕೌಶಲ್ಯಗಳು ಹಾಗೂ ಹವ್ಯಾಸ ಬೆಳೆಸುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುವು ಮಾಡುತ್ತದೆ. ಈ ನಿಟ್ಟಿನಲ್ಲಿ 1 ರಿಂದ 7ನೇ ತರಗತಿವರೆಗೆ ಓದುತ್ತಿರುವ ಮಕ್ಕಳಲ್ಲಿ ಓದುವ ಕೌಶಲ್ಯ ಸಂಸ್ಕೃತಿ ಮತ್ತು ಅಭ್ಯಾಸವನ್ನು ಬೆಳೆಸುವುದು ಓದು ಅಭಿಯಾನದ ಉದ್ದೇಶವಾಗಿದೆ.
ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಲು, ಅಭಿಯಾನದ ರೂಪದಲ್ಲಿ ಓದುವ ಚಟುವಟಿಕೆಗಳನ್ನು ಆಯೋಜಿಸಿ, ಮಕ್ಕಳಲ್ಲಿ ಓದುವಿಕೆ ಮತ್ತು ಪುಸ್ತಕಗಳ ಬಗ್ಗೆ ಒಲವು ಬೆಳಸುವಂತೆ ಕ್ರಮವಹಿಸಬೇಕಾಗಿರುತ್ತದೆ. ಗ್ರಹಿಕೆ ಸಾಮರ್ಥ್ಯಗಳನ್ನು ಹಾಗೂ ಅರಿವಿನ ಕೌಶಲ್ಯಗಳ ಅಭಿವೃದ್ಧಿಗೆ ಪುಸ್ತಕಗಳು ಪಾತ್ರ ಮಹತ್ವದ್ದಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 7ನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗಾಗಿ ಶಾಲೆಗಳಲ್ಲಿ ರಾಜ್ಯಾದ್ಯಂತ 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯನ್ನು ವಿನ್ಯಾಸಗೊಳಿಸಲಾಗಿದೆ. ಮಕ್ಕಳಿಗೆ ಪ್ರತಿ 21 ದಿನ ಮಾಡಬೇಕಾದ ಚಟುವಟಿಕೆಗಳ ವಿವರವಾದ ವಿನ್ಯಾಸದೊಂದಿಗೆ ಕಥೆಯ ಚಟುವಟಿಕೆ ಮಾರ್ಗದರ್ಶಿ ವಿವರಗಳನ್ನು ಲಗತ್ತಿಸಲಾಗಿದೆ. ಪ್ರಾಥಮಿಕ ತರಗತಿ ಮಕ್ಕಳಿಗೆ ತರಗತಿ/ವಯಸ್ಸಿಗೆ ಸೂಕ್ತವಾದ ಓದುವ ಸಾಮಗ್ರಿಗಳು ಲಭ್ಯವಿಲ್ಲದಿದ್ದರೆ, ಕಥೆಯ ಚಟುವಟಿಕೆ ಮಾರ್ಗದರ್ಶಿ. pdf ಅನ್ನು ಬಳಸಬಹುದು. ಇದರಲ್ಲಿರುವ, ಬಾರ್ಕೋಡ್ ಅನ್ನು ಸ್ಕ್ಯಾನ್ ಮಾಡಿ ಮಕ್ಕಳಿಗೆ ಕಥೆಗಳನ್ನು ಓದಿ ಹೇಳಬಹುದು.
ಚಟುವಟಿಕೆಯನ್ನು ಪ್ರಾರ್ಥನಾ ಸಭೆ, ನಲಿಕಲಿ ತರಗತಿಯ ಮೊದಲನೆಯ ಅವಧಿ ಅಥವಾ ಶಾಲಾ ಪಠ್ಯಕ್ರಮದಲ್ಲಿ ನಿಗದಿಪಡಿಸಿದ ಗ್ರಂಥಾಲಯದ ಅವಧಿಯ ಹೀಗೆ ಶಾಲೆಯ ವಹಿವಾಟಿಗೆ ಅನ್ವಯಿಸುವಂತೆ ಹಾಗೂ ಬೋಧನೆಗೆ ತೊಂದರೆಯಾಗದಂತೆ ಚಟುವಟಿಕೆಗಳನ್ನು ಕಡ್ಡಾಯವಾಗಿ ಆಯೋಜಸಿಸುವುದು. ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿ ಶಿಕ್ಷಕರಿಗೆ ಅದರ ಪರಿಚಯ ಮಾಡಿಕೊಡಲು ಸಹಕಾರಿಯಾಗುವಂತೆ ವಿನ್ಯಾಸಗೊಂಡಿದೆ. ಇದಲ್ಲದೆ ಶಿಕ್ಷಕರು ತಮ್ಮ ಕ್ರಿಯಾ ಶೀಲತೆಯಿಂದ ಇತರೆ ಓದುವ ಚಟುವಟಿಕೆಗಳನ್ನು ಶಾಲೆಗಳಲ್ಲಿ ಅಳವಡಿಸಿಕೊಳ್ಳಬಹುದಾಗಿದೆ.
ಓದುವ ಅಭಿಯಾನದ ಸುತ್ತೋಲೆ ಮತ್ತು ಮಾರ್ಗದರ್ಶಿ ಪುಸ್ತಕ ಇಲ್ಲಿದೆ.
Click Here To Download Circular Circular
No comments:
Post a Comment
If You Have any Doubts, let me Comment Here