Regarding computerization and finalization of service details of teachers/officers/non-teaching employees in EEDS software
ಇ.ಇ.ಡಿಎಸ್ ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ.
ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಬಟವಾಡೆ ಅಧಿಕಾರಿಗಳಾದ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು ಹಾಗೂ ಎಲ್ಲಾ ಕಛೇರಿ ಮುಖ್ಯಸ್ಥರುಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ ಉಲ್ಲೇಖ- ರಲ್ಲಿ 2023-24ನೇ ಸಾಲಿನಲಿ, ರಾಜ್ಯದಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲಿ ಕರ್ತವ್ಯ ನಿರ್ವಹಿಸುತ್ತಿರುವವರ ವಲಯ ವರ್ಗಾವಣೆ, ನಿರ್ದಿಷ್ಟಪಡಿಸಲಾದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಗರಿಷ್ಠ ಅವಧಿ ಪೂರೈಸಿರುವವರ ಹಿಮ್ಮುಖ ವರ್ಗಾವಣೆ, ಶಿಕ್ಷಕರ ಕೋರಿಕೆ ವರ್ಗಾವಣೆ ಪರಸ್ಪರ ವರ್ಗಾವಣೆ ಗಳನ್ನು ಈಗಾಗಲೇ ಯಶಸ್ವಿಯಾಗಿ ನಿರ್ವಹಿಸಲಾಗಿರುತ್ತದೆ. ಅಲ್ಲದೇ ಸರ್ಕಾರದ ಆದೇಶದ ಮೂಲಕ ವರ್ಗಾವಣೆಗಳು ಜಾರಿಗೊಂಡಿರುತ್ತವೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಎಲ್ಲ ಬಟವಾಡೆ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಿಂದ ಹೊರಗೆ ವರ್ಗಾವಣೆ ಪಡೆದಿರುವ ನೌಕರರನ್ನು ತಮ್ಮ ಲಾಗಿನ್ ಇಂದ Transfer Out ಮತ್ತು Re Assign ಮಾಡುವುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here