JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, September 11, 2024

Regarding the extension of state pay facilities to the staff of aided educational institutions

  Jnyanabhandar       Wednesday, September 11, 2024
Regarding the extension of state pay facilities to the staff of aided educational institutions under the purview of the Department of School Education and Literacy as per the recommendation of the 7th State Pay Commission.

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೂ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸುವ ಬಗ್ಗೆ ಆದೇಶ ಹೊರಡಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪ್ರಾಥಮಿಕ)ಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಸದರಿ ಆದೇಶದ ಕಂಡಿಕೆ-8ರಲ್ಲಿ "ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ" ಎಂದು ಆದೇಶಿಸಲಾಗಿರುತ್ತದೆ ಎಂದಿದ್ದಾರೆ.

ಸರ್ಕಾರದ ಆದೇಶದಲ್ಲಿ ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ವಿಸ್ತ್ರತವಾದ ಆದೇಶವನ್ನು ಹೊರಡಿಸಿದ್ದು, ಸದರಿ ಆದೇಶದ ಕಂಡಿಕೆ 11.1ರಲ್ಲಿ "ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ" ಎಂದು ಆದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದಿಂದ ಸಹಾಯಾನುದಾನ ಪಡೆಯುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿನ ಶಾಲಾ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಇತರೆ ಅನುದಾನಿತ ಶಿಕ್ಷಣ ಸಂಸ್ಥೆಗಳ ರಾಜ್ಯ ವೇತನ ಶ್ರೇಣಿಯಲ್ಲಿರುವ ನೌಕರರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ:ಆಇ 21 ಎಸ್‌ಆರ್‌ಪಿ 2024, ದಿನಾಂಕ:17.08.2024ರಲ್ಲಿ ಹೊರಡಿಸಿರುವ ಕರ್ನಾಟಕ ನಾಗರೀಕ ಸೇವಾ(ಪರಿಷ್ಕೃತ ವೇತನ) ನಿಯಮಗಳು-2024 ಹಾಗೂ ಸಂಬಂಧಿತ ಸರ್ಕಾರದ ಆದೇಶಗಳನ್ನು ವಿಸ್ತರಿಸಲು ಸರ್ಕಾರದ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

logoblog

Thanks for reading Regarding the extension of state pay facilities to the staff of aided educational institutions

Previous
« Prev Post

No comments:

Post a Comment

If You Have any Doubts, let me Comment Here