Regarding the grant of financial facilities to the eligible daily wage workers notified under the Karnataka Daily Wages Welfare Act 2012 as per the revised pay scales of 2024
ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ..
ಮೇಲೆ (1)ರಲ್ಲಿ ಓದಲಾದ ಅಧಿಸೂಚನೆಯನ್ವಯ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ.
ಮೇಲೆ (2)ರಲ್ಲಿ ಓದಲಾದ ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಸೇವಾ ಮುಂದುವರಿಕೆಗೆ ಅರ್ಹರಾದ ದಿನಗೂಲಿ ನೌಕರರಿಗೆ ಇವರುಗಳನ್ನು ಅಧಿಸೂಚಿಸಿದ ದಿನಾಂಕದಿಂದ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನ, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ, ಅವರನ್ನು ಮುಂದುವರೆಸುವ ಬಗ್ಗೆ.
ಮೇಲೆ (1)ರಲ್ಲಿ ಓದಲಾದ ಅಧಿಸೂಚನೆಯನ್ವಯ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ.
ಮೇಲೆ 12)ರಲ್ಲಿ ಓದಲಾದ ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಸೇವಾ ಮುಂದುವರಿಕೆಗೆ ಅರ್ಹರಾದ ದಿನಗೂಲಿ ನೌಕರರಿಗೆ ಇವರುಗಳನ್ನು ಅಧಿಸೂಚಿಸಿದ ದಿನಾಂಕದಿಂದ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನ, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ, ಅವರನ್ನು ಮುಂದುವರೆಸುವ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡುವಂತೆ ಆದೇಶಿಸಲಾಗಿದೆ ಹಾಗೂ ಇವರುಗಳು ಅರ್ಹರಿರುವ ಇತರ ಸೌಲಭ್ಯಗಳ ಕುರಿತು ಆದೇಶ ಮಾಡಲಾಗಿದೆ.
ಮೇಲೆ (ಆ)ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪು ದಿನಗೂಲಿ ನೌಕರರಿಗೆ ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ 2018ರ ಪರಿಷ್ಕೃತ ವೇತನ ಶ್ರೇಣಿಗಳನ್ನಯ ಅವರುಗಳನ್ನು ಮುದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನವನ್ನು ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ ನಿಗದಿಗೊಳಿಸಿ ಆದೇಶಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here