JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, September 7, 2024

Regarding the permission to start English medium classes

  Jnyanabhandar       Saturday, September 7, 2024
Regarding the permission to start English [Bilingual] medium classes along with existing Kannada/other medium from the year 2024-25 in government primary schools.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆಗೆ ಆಂಗ್ಲ [ದ್ವಿಭಾಷಾ (Bilingual)]ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿರುವ ಕುರಿತು.

ಉಲ್ಲೇಖ: 1.ಸರ್ಕಾರದ ಆದೇಶ ಸಂಖ್ಯೆ: ಇಪಿ 137 ಪಿಜಿಸಿ 2024 ದಿನಾಂಕ: 15.06.2024

2. ಈ ಕಛೇರಿ ಏಕಕಡತ ಸಂಖ್ಯೆ 1475438 ರಲ್ಲಿ ಸರ್ಕಾರದ ಅನುಮೋದನೆಗೆ ಕೋರಿ ಸಲ್ಲಿಸಿದ ಪ್ರಸ್ತಾವನೆಯನುಸಾರ ಸರ್ಕಾರಿ ಆದೇಶ ಸಂಖ್ಯೆ:ಇಪಿ 137 ಪಿಜಿಸಿ 2024; ದಿನಾಂಕ 03.09.2024.

ವಿಷಯಾನ್ವಯವಾಗಿ ರಾಜ್ಯದ ಸನ್ಮಾನ್ಯ ಮುಖ್ಯ ಮಂತ್ರಿಗಳು 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದ ಕಂಡಿಕೆ-96 (5)ರಲ್ಲಿ ರಾಜ್ಯದಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ-1ರನ್ವಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ. ಅದರಂತೆ ಈಗಾಗಲೇ ರಾಜ್ಯದ್ಯಂತ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿರುತ್ತದೆ.

ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಉಲ್ಲೇಖ-2ರ ಯ ಏಕಕಡತದ ಮೂಲಕ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.

ಅದರಂತೆ ಸರ್ಕಾರವು 2024-25ನೇ ಸಾಲಿನಿಂದ ಉಲ್ಲೇಖಿತ-3ರ ಆದೇಶದ ಅನುಬಂಧದಲ್ಲಿನ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018 ದಿನಾಂಕ: 18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿಸಿ ಆದೇಶಿಸಲಾಗಿರುತ್ತದೆ. (ಪತಿಗಳನ್ನು ಲಗತ್ತಿಸಿದೆ)

ಸದರಿ ಆದೇಶದಲ್ಲಿನ ಅಂಶಗಳನ್ವಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

logoblog

Thanks for reading Regarding the permission to start English medium classes

Previous
« Prev Post

No comments:

Post a Comment

If You Have any Doubts, let me Comment Here