Online Application Invitation for Post Matric Scholarship, Fee Reimbursement, Vidyasiri-Meal and Housing Assistance Scheme facility.
2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಅರ್ಹ ಪಿಯುಸಿ ಸಮಾನಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.10.2024
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. 2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಅರ್ಹ ಪಿಯುಸಿ ಸಮಾನಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಮತ್ತು ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.09.2024ಕ್ಕೆ ನಿಗಧಿಪಡಿಸಲಾಗಿತ್ತು.
ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡಿರುತ್ತಾರೆ. ಆದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.10.2024ರ ವರೆಗೆ ವಿಸ್ತರಿಸಲಾಗಿದೆ. ಪ್ರಕಟಣೆಯನ್ನು ಈ ಪತ್ರದೊಂದಿಗೆ ಲಗತ್ತಿಸಲಾಗಿದೆ. ಸದರಿ ಪ್ರಕಟಣೆಯನ್ನು ಜಿಲ್ಲಾಮಟ್ಟದ ಎಲ್ಲಾ ದಿನಪತ್ರಿಕೆಗಳಲ್ಲಿ ಉಚಿತವಾಗಿ 3 ದಿನಗಳ ಕಾಲ ಪ್ರಚುರ ಪಡಿಸುವಂತೆ ಹಾಗೂ ಎಲ್ಲಾ ಸರ್ಕಾರದ ಕಛೇರಿಗಳು ಮತ್ತು ಕಾಲೇಜುಗಳು ಮತ್ತು ಕಾಲೇಜುಗಳ ನಾಮಫಲಕಗಳಲ್ಲಿ ಪ್ರಕಟಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.
𝟐𝟎𝟐𝟒-𝟐𝟓ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 10ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ.
*👉ಅರ್ಜಿ ಸಲ್ಲಿಸಲು ದಾಖಲೆಗಳು*
1. ವಿದ್ಯಾರ್ಥಿಗಳ ಆಧಾರ್
2. ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
3. ವಿದ್ಯಾರ್ಥಿಗಳ ಇ-ಮೇಲ್ ಐ.ಡಿ.
4. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
5. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
6.SATS ಸಂಖ್ಯೆ
*👉ಅರ್ಜಿ ಸಲ್ಲಿಸಲು ಹಾಗೂ ಹಿಂದಿನ ವರ್ಷಗಳ ವಿದ್ಯಾರ್ಥಿ ವೇತನ ಜಮೆ ಆಗಿದೆಯಾ ಎಂದು ತಿಳಿಯಲು ಲಿಂಕ್ ಕ್ಲಿಕ್ ಮಾಡಿ*
No comments:
Post a Comment
If You Have any Doubts, let me Comment Here