Regarding the cancellation of candidature of some candidates selected for the vacant posts of Assistant Professors in Government First Grade Colleges in the year 2015.
2015ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆ ಮಾಡಲಾದ ಕೆಲವು ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದುಪಡಿಸುವ ಬಗ್ಗೆ.
1. ಸರ್ಕಾರದ ಅಧಿಸೂಚನೆ ಸಂಖ್ಯೆ ED 186, DCE 2020, ದಿನಾಂಕ : 03-02-2021
2. ಸರ್ಕಾರದ ಪತ್ರ ಸಂಖ್ಯೆ: ED 131, DCE 2017, ದಿನಾಂಕ: 08-02-2021
3. ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರ ಪತ್ರ ಸಂಖ್ಯೆ: ಕಾಶಿಇ/ನೇವಿ-1/ಸಪ್ರಾಹೆಪ/125/2021- 22, ໖: 03.09.2024
ಪ್ರಸ್ತಾವನೆ:
ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 29.01.2021ರಲ್ಲಿ ಸಲ್ಲಿಸಿದ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನುಸಾರ 44 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಧಿಸೂಚಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿ ಹೆಚ್ಚುವರಿಯಾಗಿ ಆಯ್ಕೆಯಾದ ಒಟ್ಟು 44 ಅಭ್ಯರ್ಥಿಗಳ ಶೈಕ್ಷಣಿಕ ಮತ್ತು ಮೀಸಲಾತಿ ಅರ್ಹತೆಯ ದಾಖಲೆಗಳನ್ನು ಅವುಗಳ ನೈಜತೆಯನ್ನು ಪರಿಶೀಲಿಸಿ, ವರದಿಯನ್ನು ಸಲ್ಲಿಸುವಂತೆ ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರನ್ನು ಕೋರಲಾಗಿತ್ತು. ಅದರಂತೆ ಕ್ರಮವಹಿಸಿ, ಸಕ್ಷಮ ಪ್ರಾಧಿಕಾರಗಳಿಂದ ಸ್ವೀಕೃತವಾಗಿರುವ ನೈಜತೆ ವರದಿ ಹಾಗೂ ಅಗತ್ಯ ದಾಖಲೆಗಳು ಕ್ರಮಬದ್ಧವಾಗಿರುವ ಒಟ್ಟು 33 ಅಭ್ಯರ್ಥಿಗಳಿಗೆ ಸರ್ಕಾರವು ವಿವಿಧ ದಿನಾಂಕಗಳಂದು ನೇಮಕಾತಿ ಆದೇಶ ಹೊರಡಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (3) ರಲ್ಲಿ ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 186 ಡಿಸಿಇ 2020, ದಿನಾಂಕ:03.02.2021ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿ ಆಯ್ಕೆಗೊಂಡು ಕರ್ತವ್ಯಕ್ಕೆ ವರದಿಮಾಡಿಕೊಳ್ಳದ ಈ ಕೆಳಕಂಡ 07 ಅಭ್ಯರ್ಥಿಗಳ ನೇಮಕಾತಿ ಆಯ್ಕೆಯನ್ನು ರದ್ದುಪಡಿಸಲು ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರು ಕೋರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
No comments:
Post a Comment
If You Have any Doubts, let me Comment Here