Recruitment notification of candidate selected for the post of Assistant Professor in Government First Class College under the administration of College Education Department
ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಯ ನೇಮಕಾತಿ ಅಧಿಸೂಚನೆ.
ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 33 ಡಿಸಿಇ 2017, ದಿನಾಂಕ:04.02.2017ರಲ್ಲಿ ಪ್ರಕಟಿಸಲಾಗಿರುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ವರದಿಯನ್ವಯ ನಿರ್ವಹಣಾಶಾಸ್ತ್ರ ವಿಷಯದ ಪರಿಷ್ಕೃತ ಆಯ್ಕೆಪಟ್ಟಿಯಂತೆ ರದ್ದುಪಡಿಸಲಾದ ಅಭ್ಯರ್ಥಿಗಳ ಬದಲು 16 ಅಭ್ಯರ್ಥಿಗಳ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 226 ಡಿಸಿಇ 2017, ದಿನಾಂಕ:23.06.2020ರಲ್ಲಿ ಪ್ರಕಟಿಸಲಾಗಿರುತ್ತದೆ.
ತದನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿದ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 186 డిసిఇ 2020, ದಿನಾಂಕ:03.02.2021ರಂದು ಪ್ರಕಟಿಸಲಾಗಿರುತ್ತದೆ.
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು/ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ಯು.ಜಿ.ಸಿ ವೇತನ ಶ್ರೇಣಿ ರೂ.57700-182400ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.
No comments:
Post a Comment
If You Have any Doubts, let me Comment Here