HK 5267 Teachers Recruitment 2024
2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ 2024-25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
໙໙:
1. 2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 103.
2. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರ : 23(1).2/23/13/2024-25/2-1490721, ದಿನಾಂಕ: 13.09.2024.
ಪ್ರಸ್ತಾವನೆ
ಮೇಲೆ ಓದಲಾದ ಕ್ರಮಾಂಕ (1)ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ "ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು' ಎಂದು ಘೋಷಿಸಲಾಗಿರುತ್ತದೆ.
ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80
ಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು
ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ,
ಬೆಂಗಳೂರು ಇವರು ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಇಪಿ 230 ಪಿಬಿಎಸ್ 2024, ಬೆಂಗಳೂರು, ದಿನಾಂಕ: 07ನೇ ಅಕ್ಟೋಬರ್ 2024.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಈ ಕೆಳಗೆ ವಿವರಿಸಲಾದಂತೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here