IAS Officers Transfer Order Dated 05-10-2024
ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಬಿ. ಬಿ. ಕಾವೇರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಹೊಸ ಆಯುಕ್ತರನ್ನು ನೇಮಕ ಮಾಡಿದೆ.
ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ಪಟ್ಟಿ ಇಲ್ಲಿದೆ.
ಶನಿವಾರ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಾಲತೇಶ್, ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ & ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ. ಬಿ. ಬಿ. ಕಾವೇರಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.
* ಡಾ. ತ್ರಿಲೋಕ್ ಚಂದ್ರ ಕೆ. ವಿ. (ಕೆಎನ್: 2007). ಮುಖ್ಯಮಂತ್ರಿಗಳ ಕಾರ್ಯದರ್ಶಿ, ಬೆಂಗಳೂರು. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿ ನೇಮಕ. ಆಯುಕ್ತಾಗಿದ್ದ ಬಿ. ಬಿ. ಕಾವೇರಿ ವರ್ಗಾವಣೆ.
* ಬಿ. ಬಿ. ಕಾವೇರಿ (ಕೆಎನ್: 2008). ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ಬೆಂಗಳೂರು. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ. ಈ ಹುದ್ದೆಯಲ್ಲಿದ್ದ ಡಾ. ತ್ರಿಲೋಕ್ ಚಂದ್ರ ಕೆ. ವಿ. ವರ್ಗಾವಣೆ.
* ಬಿ. ಬಿ. ಕಾವೇರಿ. ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಹೆಚ್ಚುವರಿ ಹೊಣೆ, ಕಾರ್ಯದರ್ಶಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಈ ಹುದ್ದೆಯಲ್ಲಿದ್ದ ಡಾ. ತ್ರಿಲೋಕ್ ಚಂದ್ರ ಕೆ. ವಿ. ವರ್ಗಾವಣೆ.
ಆದೇಶ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here