Regarding the action to be taken on complaints received from the public and representatives of the people against the Government Officers/Employees.
ವಿಷಯ: ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯ ಸರ್ಕಾರದಿದಂ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದಂತ ಕ್ರಮಗಳಿಗೆ ಕಾಲಮಿತಿಯನ್ನು ನಿಗದಿಗೊಳಿಸಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ನೌಕರರ ವಿರುದ್ಧದ ದೂರುಗಳಿಗೆ ಇಂತಿಷ್ಟು ಕಾಲ ಮಿತಿಯಲ್ಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೂ, ಇನ್ಮುಂದೆ ಸರ್ಕಾರಿ ನೌಕರರ ವಿರುದ್ಧ ಕ್ರಮ ಫಿಕ್ಸ್ ಆದಂತೆ ಆಗಿದೆ.
ಈ ಕುರಿತಂತೆ ಕಲಬುರ್ಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರಿಂದ, ಜನಪ್ರತಿನಿಧಿಗಳಿಂದ ಅಥವಾ ಸಂಘ-ಸಂಸ್ಥೆಗಳಿಂದ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಲ್ಲೇಖಿತ ನಿಯಮಗಳಡಿಯಲ್ಲಿ ಸ್ಪಷ್ಟಪಡಿಸಲಾಗಿರುತ್ತದೆ. ಇಂತಹ ದೂರುಗಳು ಕೆಲವು ಸಂದರ್ಭಗಳಲ್ಲಿ ವೈಯುಕ್ತಿಕ ದ್ವೇಷ, ಅಸೂಯೆ ಅಥವಾ ಪೂರ್ವಾಗ್ರಹ ಪೀಡಿತವಾಗಿರುತ್ತವೆ. ಅಲ್ಲದೆ ದೂರುಗಳಿಗೆ ಪೂರಕವಾದ ಮಾಹಿತಿ/ ದಾಖಲೆಗಳನ್ನು ಸಾಮಾನ್ಯವಾಗಿ ಲಭ್ಯಪಡಿಸಿರುವುದಿಲ್ಲ. ಇಂತಹ ದೂರುಗಳಿಂದಾಗಿ ಸರ್ಕಾರಿ ಅಧಿಕಾರಿ/ ನೌಕರರ ದೈನಂದಿನ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗುವುದಲ್ಲದೇ ದಕ್ಷ ಹಾಗೂ ಪ್ರಾಮಾಣಿಕ ನೌಕರರ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಈ ದೂರುಗಳನ್ನು ಸಮಂಜಸವಾಗಿ ನಿರ್ವಹಿಸದೇ ಇರುವುದರಿಂದ, ಸರ್ಕಾರಿ ನೌಕರರು ಮುಕ್ತ ಮತ್ತು ನಿರ್ಭೀತರಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಕಾರಣ, ಮುಂದಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಈ ಕೆಳಗೆ ತಿಳಿಸಿರುವಂತೆ ಹಂತವಾರು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ.
ಕಾರಣ, ಮುಂದಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಈ ಕೆಳಗೆ ತಿಳಿಸಿರುವಂತೆ ಹಂತವಾರು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದ್ದಾರೆ.
ಕ್ರಮಗಳ ಕುರಿತು ತಿಳಿಯಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here