Regarding Giving Appointment Order to GPSTR Candidates
2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ ಹುದ್ದೆಗೆ ಆಯ್ಕೆಯಾಗಿ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಕುರಿತು.
ವಿಷಯದನ್ವಯ, 2022-23 ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ
ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು ( 6 ರಿಂದ 8 ನೇ ತರಗತಿ) ಹುದ್ದೆಗೆ ಕೌನ್ಸಿಲಿಂಗ್ ಮೂಲಕ
ಸ್ಥಳ ಹಂಚಿಕೆ ಪ್ರಕ್ರಿಯೆ ಕೈಗೊಳ್ಳಲಾಗಿತ್ತು.
ಉಲ್ಲೇಖ 14 ರಂತೆ ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ವಿಶೇಷ ಅನುಮತಿ ಅರ್ಜಿ ಸಂಖ್ಯೆ 27984-388/2023 ಪ್ರಕರಣದಲ್ಲಿನ ಮಧ್ಯಂತರ ಆದೇಶ ದಿನಾಂಕ 03-01-2024 ಮತ್ತು 22-01-2024 ಪ್ರಕಾರ ಈಗಾಗಲೇ ನೇಮಕಾತಿ ಆದೇಶ ಪಡೆದು ನೇಮಕಗೊಂಡಿರುವ 11494 ಅಭ್ಯರ್ಥಿಗಳಿಗೆ ತಮ್ಮ ನೇಮಕಾತಿಯು ಸದರಿ ವಿಶೇಷ ಅನುಮತಿ ಅರ್ಜಿಯಲ್ಲಿ ಅಂತಿಮ ತೀರ್ಪಿಗೆ ಒಳಪಟ್ಟಿರುವ ವಿಷಯವನ್ನು ನೇಮಕಾತಿ ಪ್ರಾಧಿಕಾರಿಗಳಾದ ಜಿಲ್ಲಾ ಉಪನಿರ್ದೇಶಕರ ಪ್ರತಿ ಅಭ್ಯರ್ಥಿಗೆ ಲಿಖಿತವಾಗಿ ತಿಳಿಸಿ ಸ್ವೀಕೃತಿ ಪಡೆದಿರುವುದನ್ನು
ಪುನರ್ ಉಚ್ಚರಿಸಲಾಗಿತ್ತು.
ಮುಂದುವರೆದು, ಭಾರತ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ವಿಶೇಷ ಅನುಮತಿ ಅರ್ಜಿ ಸಂಖ್ಯೆ 27984-388/2023 ಪ್ರಕರಣದಲ್ಲಿನ ಮಧ್ಯಂತರ ಆದೇಶ ದಿನಾಂಕ 03.01.2024 ಆದೇಶಾನುಸಾರ ಈ ಹಿಂದೆ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ವಿವಿಧ ಕಾರಣಗಳಿಗಾಗಿ ಅಂದರೆ ಸಕ್ರಮ ಪ್ರಾಧಿಕಾರದಿಂದ ಅಂಕಪಟ್ಟಿ, ನೈಜತೆ ಪ್ರಮಾಣ ಪತ್ರ, ಪೋಲಿಸ್ ದೃಢೀಕರಣ, ಕನ್ನಡ ಮಾಧ್ಯಮ/ ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ ಜಾತಿ ಮತ್ತು ಆದಾಯ ಸಿಂಧುತ್ವ ಪ್ರಮಾಣ ಸ್ವೀಕೃತವಾಗದ ಮತ್ತು ನೇಮಕಾತಿ ಆದೇಶಗಳನ್ನು ತಾತ್ಕಾಲಿಕವಾಗಿ ತಡಹಿಡಿಯಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here