Regarding mandatory display of Kannada nameplates in all government departments.
ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಪ್ರದರ್ಶಿಸುವ ಕುರಿತು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಭಾಷೆಯಾಗಿರುತ್ತದೆ.
ತಮ್ಮ ಕಛೇರಿ / ಸಂಸ್ಥೆ / ವಿಶ್ವವಿದ್ಯಾಲಯಗಳಲ್ಲಿ ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಆದೇಶದಲ್ಲಿ ತಿಳಿಸಿದೆ.
ಮುಂದುವರೆದು, ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲ ಭಾಷೆಯಲ್ಲಿ ಮೇಲ್ಮಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲು ನಾನು ನಿರ್ದೇಶಿತನಾಗಿದ್ದಾರೆ.
ಇನ್ನೂ ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಎಲ್ಲಾ ವಲಯ ಜಂಟಿ ನಿರ್ದೇಶಕರಿಗೆ, ಎಲ್ಲಾ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಅಗತ್ಯ ಕ್ರಮವಹಿಸುವಂತೆ ಪರಿಚಲನಾದೇಶ ಮಾಡಿದ್ದಾರೆ.
No comments:
Post a Comment
If You Have any Doubts, let me Comment Here