402 PSI Provisional Score List 2024
402 ಪಿಎಸ್‌ಐ ಹುದ್ದೆಗಳಿಗೆ ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದ್ದ ಪರೀಕ್ಷೆಯ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಪ್ರಕಟಿಸಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಳೆದ ತಿಂಗಳು ನಡೆಸಲಾಗಿತ್ತು.
ಇಂದು ಅಭ್ಯರ್ಥಿಗಳು ಪಡೆದ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಪರೀಕ್ಷೆ ಬರೆದ 42,933 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳಿದ್ದಲ್ಲಿ ನ.9ರೊಳಗೆ ಸಲ್ಲಿಕೆ ಮಾಡುವಂತೆ ಪ್ರಟಣೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಕ್ಟೋಬರ್ ತಿಂಗಳಲ್ಲಿ ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ನ. 9ರ ಸಂಜೆ 5.30 ವರೆಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಪೇಪರ್ -1, ಪೇಪರ್-2ರಲ್ಲಿ ಪಡೆದ ನಿರ್ದಿಷ್ಟ ಅಂಕಗಳು ಹಾಗೂ ಎರಡೂ ಪತ್ರಿಕೆ ಸೇರಿ ನೇಮಕಾತಿಗೆ ಪರಿಗಣಿಸುವ ಒಟ್ಟು ಅಂಕಗಳ ಮಾಹಿತಿಯನ್ನೂ ನೀಡಲಾಗಿದೆ.
ಪರೀಕ್ಷಾ ಅಂಕಪಟ್ಟಿ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿರಿ.
No comments:
Post a Comment
If You Have any Doubts, let me Comment Here