About holding a special village meeting under the leadership of Gram Panchayat for the protection of children's rights
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಗ್ರಾಮಪಂಚಾಯಿತಿಯವರು ನೇತೃತ್ವದಲ್ಲಿ ವಿಶೇಷ ಗ್ರಾಮ ಸಭೆ ನಡೆಸುವ ಬಗ್ಗೆ ಸರ್ಕಾರದ ಆದೇಶ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಭಾಗವಹಿಸುವಿಕೆ ಹಕ್ಕು ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಗಳಿಂದ ಮಕ್ಕಳ ಗ್ರಾಮ ಸಭೆಯನ್ನು ನಡೆಸಲು 2006 ರಲ್ಲಿ ಉಲ್ಲೇಖ(1) ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಧ್ಯಾಯ || ರ ಪ್ರಕರಣ 3(ಎಚ್)(2)(1) (2015ರ ತಿದ್ದುಪಡಿಯಂತೆ)ರಲ್ಲಿ ನಿರ್ದೇಶಿಸಿರುವಂತೆ ಪ್ರಮುಖವಾದ ನಿಲುವನ್ನು ತೆಗೆದುಕೊಂಡಿದೆ.
ಇದು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 1989, ಭಾರತದ ಸಂವಿಧಾನದಲ್ಲಿ ಮಕ್ಕಳಿಗಿರುವ ಹಕ್ಕುಗಳನ್ನು ಮಾನ್ಯ ಮಾಡುವುದರಲ್ಲಿ ಮಹತ್ತರವಾದ ಹೆಜ್ಜೆಯಾಗಿದೆ. 2006ರಲ್ಲಿ ಉಲ್ಲೇಖ(2)ರ ಸುತೋಲೆಯನ್ನು ಹೊರಡಿಸುವುದರ ಮೂಲಕ ಗ್ರಾಮೀಣಾಭಿವೃದ್ಧಿಯಲ್ಲಿ ಮಕ್ಕಳ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿದೆ. 2006 ರಿಂದ ಪ್ರತಿ ವರ್ಷವೂ ಮಕ್ಕಳ ಗ್ರಾಮ ಸಭೆಯನ್ನು ನಡೆಸಿಕೊಂಡು ಬರಲಾಗುತ್ತಿದೆ.
ಭಾರತ ಸರ್ಕಾರವು, ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು- 2030 ನ್ನು ಒಪ್ಪಿಕೊಂಡಿದ್ದು ಮಕ್ಕಳ ಆರೋಗ್ಯ ರಕ್ಷಣೆ, ಶಿಕ್ಷಣ ಅಭಿವೃದ್ಧಿ ಸಾಧನೆ ಹಾಗೂ ಹಸಿವು, ತಾರತಮ್ಯ ಮತ್ತು ಶೋಷಣೆ ಕೊನೆಗೊಳಿಸುವುದಕ್ಕೆ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪರಿಸ್ಥಿತಿಯನ್ನು ತಳಮಟ್ಟದಿಂದಲೇ ಗಮನಿಸಿ ಅವಶ್ಯಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಎಲ್ಲಾ ಇಲಾಖೆಗಳು, ಜನಪ್ರತಿನಿಧಿಗಳು ಮತ್ತು ಸಮುದಾಯದ ಜವಾಬ್ದಾರಿಯಾಗಿದೆ. ಮಕ್ಕಳ ರಕ್ಷಣೆಗೆ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೂಪಿಸಿರುವ ಹಲವು ಯೋಜನೆಗಳ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಎಲ್ಲರ ಕರ್ತವ್ಯವಾಗಿರುತ್ತದೆ. ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿಯ ಅಂಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ 'ಮಕ್ಕಳ ಸ್ನೇಹಿ ಮತ್ತು ಮಕ್ಕಳ ಸುರಕ್ಷಿತ' ಪಂಚಾಯತಿಗಳನ್ನಾಗಿಸಲು ಉಲ್ಲೇಖ(3)ರ ಸುತ್ತೋಲೆಯ ಮೂಲಕ 2020ರಿಂದ ಪ್ರತಿ ವರ್ಷವೂ 'ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ'ವನ್ನು ಆಯೋಜಿಸಿ, ಈ ಅವಧಿಯಲ್ಲಿ ಒಂದು ದಿನ ಮಕ್ಕಳ ಗ್ರಾಮ ಸಭೆಯನ್ನು ನಡೆಸಿಕೊಂಡು ಬರಲಾಗುತ್ತಿದೆ.
ಮುಂದುವರೆದು, ಉಲ್ಲೇಖಿತ (3)ರಿಂದ(6)ರ ಸುತ್ತೋಲೆಗಳಲ್ಲಿ ವಿವರವಾದ ಮಾರ್ಗಸೂಚಿ ನೀಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ 14 ನವಂಬರ್ 2024ರಿಂದ 24 ಜನವರಿ 2025 ರವರೆಗೆ, 10 ವಾರಗಳ 'ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ" ಮತ್ತು ಗ್ರಾಮ ಪಂಚಾಯತಿಗಳಲ್ಲಿ ಒಂದು ದಿನ "ಮಕ್ಕಳ ವಿಶೇಷ ಗ್ರಾಮ ಸಭೆ"ಯನ್ನು ಈ ಕೆಳಗೆ ವಿವರಿಸಿರುವಂತೆ ನಡೆಸಲು ನಿರ್ಣಯಿಸಲಾಗಿದೆ.
ಮಾಹಿತಿಗಾಗಿ ಪಿಡಿಎಫ್ ಆವೃತ್ತಿ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here