Revision of the rates of Dearness Allowance payable in
2024 Revised Pay Scales and Revised Pension -reg.
ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ವೇತನ ಶ್ರೇಣಿಗಳು ಮತ್ತು ಪಿಂಚಣಿ ಪರಿಷ್ಕರಣೆ ಕುರಿತ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ನೀತಿ ನಿರ್ಣಯವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ, ಕ್ರಮವಾಗಿ ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 23.08.2024 ಮತ್ತು 28.08.2024ರ ಸರ್ಕಾರಿ ಆದೇಶಗಳಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಪರಿಷ್ಕೃತ ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಿ ವಿಸ್ತತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ.
ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅವಕಾಶಗಳನ್ನು ಕಲ್ಪಿಸಲಾಗಿರುತ್ತದೆ.
ಮೇಲೆ ಕ್ರಮ ಸಂಖ್ಯೆ (3) ಮತ್ತು (4)ರಲ್ಲಿ ಓದಲಾದ ಆದೇಶಗಳಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಮಂಜೂರು ಮಾಡಿರುವ ಭಾರತ ಸರ್ಕಾರದ ಆದೇಶಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಆಇ 43 ಎಸ್‌ಆರ್‌ಪಿ 2024 ಬೆಂಗಳೂರು, ದಿನಾಂಕ: 27ನೇ ನವೆಂಬರ್ 2024
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರುಗಳಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಲು ಸರ್ಕಾರವು ಆದೇಶ ಹೊರಡಿಸಿದೆ.
GOVERNMENT ORDER NO. FD 43 SRP 2024,
BANGALORE, DATED 27h NOVEMBER 2024.
Government are pleased to enhance the rates of Dearness Allowance payable
to the State Government Employees on the 2024 Revised State Pay Scales from the
existing 8.50% to 10.75% of the Basic Pay with effect from 1 July 2024.
However, the monetary benefit of the revised rates of dearness allowance is
admissible w.e.f. 1s August 2024
ಆದೇಶ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here