Karnataka State Civil Services (Regulation of Transfers of Senior Panchayath Development Officers, Panchayath Development Officers, Gram Panchayath Secretaries and Rural Development Assistant (Grade I and II) And Second Division Accounts Assistants) Rules, 2024
ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸದರಿ ಅಧಿನಿಯಮದ 3ನೇ ಪ್ರಕರಣದ 2(ಎ) ಉಪ ಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2)ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024ರ ಕರಡನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: RDPR/80/GPK/2021 (E), ದಿನಾಂಕ: 05-07-2024 ರ ಮೂಲಕ ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ V A ರಲ್ಲಿ ಮತ್ತು ಸರ್ಕಾರದ ಸೇರ್ಪಡೆ ಸಂಖ್ಯೆ: RDPR/80/GPK/2021 (E), ದಿನಾಂಕ: 11-09-2024 ರ ಮೂಲಕ ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ ||| ರಲ್ಲಿ ಪ್ರಕಟಿಸಿ ಸದರಿ ನಿಯಮಗಳಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಪ್ರಕಟಣೆಯ ದಿನಾಂಕದಿಂದ ಹದಿನೈದು ದಿನಗಳ ಒಳಗಾಗಿ ಸಲ್ಲಿಸಲು ಆಹ್ವಾನಿಸಲಾಗಿರುವುದರಿಂದ,
ಸದರಿ ಕರಡನ್ನು ದಿನಾಂಕ: 05-07-2024 ಮತ್ತು 12-09-2024 ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿದ್ದರಿಂದ;
ಮತ್ತು ಈ ಸಂಬಂಧ ಸ್ವೀಕರಿಸಲಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರವು ಪರಿಗಣಿಸಿರುವುದರಿಂದ;
ಈಗ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (19900 ಕರ್ನಾಟಕ ಅಧಿನಿಯಮ ಸಂಖ್ಯೆ 14) ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಏನೆಂದರೆ:-
ನಿಯಮಗಳು
1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು
2. ವ್ಯಾಖ್ಯಾನಗಳು: - (1) ಈ ನಿಯಮಗಳಲ್ಲಿ, ಸಂದರ್ಭಕ್ಕೆ ಅಗತ್ಯವಿಲ್ಲದ ಹೊರತು:
a) "ವಾಸ್ತವಿಕ ಕೆಲಸ" ಎಂದರೆ ಅವನ ದೈನಂದಿನ ಹಾಜರಾತಿಯನ್ನು ದಾಖಲಿಸುವ ಸ್ಥಳದಲ್ಲಿ ನೌಕರರು ಕೆಲಸ ಮಾಡುವುದು.
b) "ನೇಮಕಾತಿ” ಎಂದರೆ ನೇರ ನೇಮಕಾತಿ, ವಿಲೀನಗೊಳ್ಳುವಿಕೆ ಅಥವಾ ಬಡ್ತಿಯ ಮೂಲಕ ನೇಮಕಾತಿ:
c) ನೇಮಕಾತಿ ಪ್ರಾಧಿಕಾರ" ಎಂದರೆ,
1. ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸಂಬಂಧಿಸಿದಂತೆ ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ.
ii. ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್- 1)ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ.
iii. ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ (ಅಭಿವೃದ್ಧಿ).
d) "ಸಕ್ಷಮ ಪ್ರಾಧಿಕಾರ" ಎಂದರೆ ಅನುಸೂಚಿಯ ಕೋಷ್ಠಕ-1 ರಲ್ಲಿ ವ್ಯಾಖ್ಯಾನಿಸಿದಂತೆ ವರ್ಗಾವಣೆ ಪ್ರಕ್ರಿಯೆ ನಿಯಂತ್ರಣ ಪ್ರಾಧಿಕಾರ.
c) "ಕೌನ್ಸಿಲಿಂಗ್" ಎಂದರೆ ವರ್ಗಾವಣೆಗಾಗಿ ಪರಿಗಣಿಸಲಾದ ವ್ಯಕ್ತಿಗೆ ಈ ನಿಯಮಗಳ ಪ್ರಕಾರ ಲಭ್ಯವಿರುವ ಸ್ಥಳ ಅಥವಾ ಹುದ್ದೆಯನ್ನು ಆಯ್ಕೆ ಮಾಡಲು ಅವಕಾಶವನ್ನು ನೀಡುವ ಮೂಲಕ ಕೌನ್ಸಿಲಿಂಗ್ ಪ್ರಕ್ರಿಯೆ;
f) "ನೌಕರ" ಎಂದರೆ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್
-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ:
2) "ನಮೂನೆ" ಎಂದರೆ ಈ ನಿಯಮಗಳಿಗೆ ಲಗತ್ತಿಸಲಾದ ನಮೂನೆಗಳು;
h) "ಸರ್ಕಾರ" ಎಂದರೆ ಕರ್ನಾಟಕ ಸರ್ಕಾರ;
1) "ಗ್ರಾಮ ಪಂಚಾಯತಿ" ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, 1993 ರ ಅಡಿಯಲ್ಲಿ ಸ್ಥಾಪಿಸಲಾದ ಗ್ರಾಮ ಪಂಚಾಯತಿ; (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)
1) "ಗ್ರಾಮ ಪಂಚಾಯತಿ ಕಾರ್ಯದರ್ಶಿ" ಎಂದರೆ ಗ್ರಾಮ ಪಂಚಾಯತಿಯ ಕಾರ್ಯದರ್ಶಿ
ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್ -1 ಮತ್ತು 2);
k) "ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ" ಎಂದರೆ ಕಾಲಕಾಲಕ್ಕೆ ಸರ್ಕಾರದಿಂದ ಅಧಿಸೂಚಿಸಲಾಗುವ ಗ್ರಾಮ ಪಂಚಾಯತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here