PM Usha Scholarship 2024
ಹೆಚ್ಚು ಅಂಕ ಪಡೆದು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರೂ ₹20,000 ವಿದ್ಯಾರ್ಥಿ ವೇತನ!
ಕೇಂದ್ರ ಸರಕಾರದ PM USHA ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನದ(Scholarship application) ಕುರಿತು ಈ ಅಂಕಣದಲ್ಲಿ ವಿವರಿಸಲಾಗಿದೆ.
ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಪ್ರತಿ ವರ್ಷವು ಸಹ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅರ್ಥಿಕ ನೆರವು(PM Usha Scholarship) ನೀಡಲು ವಿವಿಧ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
PM USHA ಯೋಜನೆಯಡಿ ಅರ್ಜಿ ಸಲ್ಲಿಸಿ ಯಾರೆಲ್ಲ ವಿದ್ಯಾರ್ಥಿ ವೇತನ ಪಡೆಯಬಹುದು? ಅರ್ಜಿಯನ್ನು ಪ್ರತಿ ವರ್ಷ ಯಾವ ಸಮಯದಲ್ಲಿ ಕರೆಯಲಾಗುತ್ತದೆ? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಈ ಕುರಿತು ಒಂದಿಷ್ಟು ಮಾಹಿತಿಯನ್ನು ಸಹ ತಿಳಿಸಲಾಗಿದೆ.
PM-USHA ಯೋಜನೆಯಡಿ ಎಷ್ಟು ಆರ್ಥಿಕ ನೆರವು ಪಡೆಯಬಹುದು?
ಕೇಂದ ಸರಕಾರದ ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಅಭಿಯಾನ(PM-USHA) ಯೋಜನೆಯಡಿ ನೀಡುವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ 80 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 3 ವರ್ಷದ ಪದವಿ ಶಿಕ್ಷಣವನ್ನು ಪಡೆಯಲು ಮೊದಲ ವರ್ಷ ರೂ 12,000 ಉಳಿದ ಎರಡು ವರ್ಷ ತಲಾ ರೂ 20,000 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
PM Usha ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಹ ವಿದ್ಯಾರ್ಥಿಗಳು ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಈ ಕೆಳಗಿನ ದಾಖಲೆಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
1) ವಿದ್ಯಾರ್ಥಿಯ ಆಧಾರ್ ಕಾರ್ಡ ಪ್ರತಿ
2) ಬ್ಯಾಂಕ್ ಪಾಸ್ ಬುಕ್
3) ದ್ವಿತೀಯ ಪಿಯುಸಿ ಮತ್ತು SSLC ಅಂಕಪಟ್ಟಿ
4) ಪದವಿ ವ್ಯಾಸಂಗಕ್ಕೆ ಪ್ರವೇಶ ಪಡೆದಿದ್ದಕೆ ಅಧಿಕೃತ ದಾಖಲೆ ಪ್ರತಿ
5) ಪೋಟೋ
6) ಮೊಬೈಲ್ ನಂಬರ್
How To APPLY For Scholarship
Online application PM Usha Scholarship- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಮನೆಯಲ್ಲಿ ಕುಳಿತುಕೊಂಡು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Step-1: PM Usha Scholarship application ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.
Step-2: ಇದಾದ ಬಳಿಕ ಇಲ್ಲಿ “Register yourself” ಬಟನ್ ಮೇಲೆ ಕ್ಲಿಕ್ ಮಾಡಿ “I agree to the following” ಎರಡು ಆಯ್ಕೆಯ ಮೇಲೆ ಟಿಕ್ ಮಾಡಿ “Next” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ “Verify” ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.Step-3: ತದನಂತರ “eEKY” ವಿಭಾಗದಲ್ಲಿ ಕೇಳಿರುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-4: ಮೇಲಿನ ಹಂತವನ್ನು ಪೂರ್ಣಗೊಳಿಸಿದ ನಂತರ login ಬಟನ್ ಮೇಲೆ ಕ್ಲಿಕ್ ಮಾಡಿ Enter OTR (One Time Registration) no.* ನಲ್ಲಿ Registration ನಂಬರ್ ಹಾಕಿ ಪಾಸ್ವರ್ಡ್ ಅನ್ನು ನಮೂದಿಸಿ ಕ್ಯಾಪ್ಚ್ ಕೋಡ್ ಹಾಕಿ Login ಬಟನ್ ಮೇಲೆ ಕ್ಲಿಕ್ ಮಾಡಬೇಕು.
No comments:
Post a Comment
If You Have any Doubts, let me Comment Here