Regarding Fee Fixation for Post Graduate (MD/MS) Course Seats in State Medical Colleges for the year 2024-25
2024-25ನೇ ಸಾಲಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ (ಎಂಡಿ/ಎಂಎಸ್) ಕೋರ್ಸಿನ ಸೀಟುಗಳಿಗೆ ಶುಲ್ಕ ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸು (ಎಂಡಿ/ಎಂಎಸ್)ಗಳ ಸೀಟು ಹಂಚಿಕೆ & ಶುಲ್ಕ ನಿಗಧಿಗೆ ಸಂಬಂಧಿಸಿದಂತೆ ಸರ್ಕಾರವು ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ (KRLMPCA)ಗಳೊಂದಿಗೆ ಪರಸ್ಪರ ಒಪ್ಪಂದದ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕಾಗಿದೆ.
ಮೇಲೆ ಓದಲಾದ ನಡವಳಿಯಲ್ಲಿ 2024-25ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ:12-06-2024ರಂದು ನಡೆದ ಸಭೆಯಲ್ಲಿ, ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳು ಶುಲ್ಕ ಹೆಚ್ಚಳ ಹಾಗೂ ಇನ್ನಿತರೆ ಕೆಲವು ಬೇಡಿಕೆಗಳನ್ನು ಸಲ್ಲಿಸಿರುತ್ತಾರೆ ಎಂದಿದ್ದಾರೆ.
ಅದರಂತೆ, ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ KPCF, KRLMPCA & AMPCK ರವರು ಸಲ್ಲಿಸಿರುವ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪ ಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ(KRLMPCA)ರವರು ಸಹಿ ಮಾಡಿ ಸರ್ಕಾರಕ್ಕೆ ಸಲ್ಲಿಸಿರುವ ಪರಸ್ಪರ ಒಡಂಬಡಿಕೆಯಂತೆ ಸರ್ಕಾರಿ/ಖಾಸಗಿ ಕೋಟಾದ ಸೀಟುಗಳಿಗೆ ಅನ್ವಯಿಸುವಂತೆ ಶೇ.10ರಷ್ಟು ಪ್ರವೇಶ ಶುಲ್ಕವನ್ನು ಹೆಚ್ಚಿಸಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಸೀಟುಗಳಿಗೆ ಈ ಕೆಳಕಂಡ ಕೋಷ್ಟಕದಲ್ಲಿ ನಮೂದಿಸಿರುವಂತೆ ಶುಲ್ಕವನ್ನು ನಿಗಧಿಪಡಿಸಲು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಿಗೆ ಸಂಬಂಧಿಸಿದಂತೆ, ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳು, ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘದ (KRLMPCA) ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳು ಹಾಗೂ ರಾಜ್ಯದ ಡೀಮ್ಸ್ ವಿಶ್ವವಿದ್ಯಾಲಯ ಮತ್ತು ಖಾಸಗಿ ವಿಶ್ವವಿದ್ಯಾಲಯದಡಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ 2024-25ನೇ ಸಾಲಿಗೆ ಪವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಿ ಕೆಳಕಂಡಂತೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸು(ಎಂಡಿ/ಎಂಎಸ್)ಗಳಿಗೆ 2024-25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿ ಈ ಕೆಳಕಂಡಂತೆ ನಿಗಧಿಪಡಿಸಲಾಗಿದೆ.
No comments:
Post a Comment
If You Have any Doubts, let me Comment Here