Regarding the holding of general elections for the Gram Panchayats about to expire
ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಕುರಿತು ರಾಜ್ಯ ಸರ್ಕಾರ ಗೆಜೆಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಸಾರ್ವತ್ರಿಕ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳು ಮತ್ತು ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಅನುಬಂಧದಲ್ಲಿ ತೋರಿಸಲಾಗಿದೆ.
ಜಿಲ್ಲಾಧಿಕಾರಿಗಳು, ಆಯೋಗವು ಆದೇಶಿಸಿರುವ ಮೇಲ್ಕಂಡ ಚುನಾವಣಾ ವೇಳಾಪಟ್ಟಿಯನ್ನು ಅನುಸರಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವು ನಿಯಮಗಳು, 1993ರ ನಿಯಮ 12ರ ಅಡಿಯಲ್ಲಿ ಚುನಾವಣಾ ಅಧಿಸೂಚನೆಯನ್ನು ಪ್ರಪತ್ರ-2 ರಲ್ಲಿ ಹೊರಡಿಸತಕ್ಕದ್ದು ಹಾಗೂ ಹೊರಡಿಸಲಾದ ಅಧಿಸೂಚನೆಯನ್ನು ಅದೇ ದಿನದಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು. ಪ್ರಕಟಿಸಿದ ಅಧಿಸೂಚನೆ ಪ್ರತಿಗಳನ್ನು ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಕಛೇರಿಯ ಸೂಚನಾ ಫಲಕದ ಮೇಲೆ ಹಾಗೂ ಇನ್ನಿತರ ಮುಖ್ಯ ಸ್ಥಳಗಳಲ್ಲೂ ಸಹ ಪ್ರದರ್ಶಿಸತಕ್ಕದ್ದು ಹಾಗೂ ಆಯೋಗಕ್ಕೆ ಅಂದೇ ಇ-ಮೇಲ್ ಮುಖಾಂತರ ಕಳುಹಿಸುವುದು.
ಅಧಿಸೂಚನೆಯ ಪ್ರತಿಯನ್ನು ಅಂದೇ ಚುನಾವಣಾಧಿಕಾರಿಗಳಿಗೆ ಕಳುಹಿಸಿಕೊಟ್ಟು ಅದೇ ದಿನದಂದು ಚುನಾವಣಾಧಿಕಾರಿಗಳು ಪ್ರಪತ್ರ-3 ರಲ್ಲಿ ಚುನಾವಣಾ ನೋಟೀಸನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿ, ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸೂಚಿಸುವುದು ಹಾಗೂ ಚುನಾವಣಾ ನೋಟೀಸಿನಲ್ಲಿ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಹೆಸರು, ಕ್ಷೇತ್ರದ ಹೆಸರು, ಸದಸ್ಯ ಸ್ನಾನಗಳ ಸಂಖ್ಯೆ ಮೀಸಲಾತಿ ವಿವರಗಳನ್ನು ಸ್ಪಷ್ಟವಾಗಿ ನಮೂದಿಸುವಂತೆ ಸೂಚನೆಗಳನ್ನು ನೀಡತಕ್ಕದ್ದು.
ದಿನಾಂಕ 23.11.2024 ರಂದು ನಾಲ್ಕನೇ ಶನಿವಾರ ನೆಗೋಷಿಯೇಬಲ್ ಇನ್ಸುಮೆಂಟ್ ಕಾಯ್ದೆಯಡಿಯಲ್ಲಿ ಘೋಷಿಸಲ್ಪಟ್ಟ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಸದರಿ ದಿನದಂದು ಯಾವುದೇ ನಾಮಪತ್ರವನ್ನು ಸ್ವೀಕರಿಸದಂತೆ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡುವುದು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308-ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ: 21-11-2024 ರಿಂದ ದಿನಾಂಕ: 11-12-2024 ರವರೆಗೆ ಜಾರಿಯಲ್ಲಿರುತ್ತದೆ.
ಗ್ರಾಮ ಪಂಚಾಯಿತಿಯ ಯಾವುದೇ ಕ್ಷೇತ್ರದಲ್ಲಿ ನಾಮಪತ್ರ ಸ್ವೀಕೃತವಾಗದೇ ಚುನಾವಣೆ ಪ್ರಕ್ರಿಯೆ ಮುಂದುವರೆಯಲಾಗದೆ ಇರುವಂತಹ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ/ನಾಮಪತ್ರ ಹಿಂತೆಗೆತ ಇತ್ಯಾದಿ ಕಾರಣಗಳಿಂದ ಯಾವುದೇ ಅಭ್ಯರ್ಥಿಯು ಕಣದಲ್ಲಿರದೆ ಆ ಗ್ರಾಮ ಪಂಚಾಯಿತಿಯ ಯಾವುದೇ ಸ್ನಾನಕ್ಕೂ ಚುನಾವಣೆ ನಡೆಯದೇ ಇದ್ದಲ್ಲಿ ಅಥವಾ ಗ್ರಾಮ ಪಂಚಾಯಿತಿಯಲ್ಲಿನ ಚುನಾವಣೆ ಘೋಷಿಸಿರುವ ಎಲ್ಲಾ ಸ್ನಾನಗಳೂ ಅವಿರೋಧವಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಯ ಫಲಿತಾಂಶವನ್ನು ಚುನಾವಣಾಧಿಕಾರಿಯು ಘೋಷಿಸಿದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದ ನಿಂತು ಹೋಗುತ್ತದೆ.
ಗ್ರಾಮ ಪಂಚಾಯಿತಿಯ ಯಾವುದೇ ಕ್ಷೇತ್ರದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿರುವ ಅವಧಿಯವರೆಗೆ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ
👇👇👇👇👇
No comments:
Post a Comment
If You Have any Doubts, let me Comment Here