Regarding restriction of smoking and consumption of other tobacco products in government offices and office premises
ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣಗಳಲ್ಲಿ ಧೂಮಪಾನ ಇತರ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿರ್ಬಂಧಿಸುವ ಬಗ್ಗೆ ರಾಜ್ಯಪತ್ರ ಪ್ರಕಟವಾಗಿದೆ.
ಉಲ್ಲೇಖ:ಅರೆ ಸರ್ಕಾರಿ ಪತ್ರ ಸಂಖ್ಯೆ:ಆಕುಕ/120/ಪ್ರಕಾ/2024, ದಿನಾಂಕ:03.09.2024.
ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS (PROHIBITION OF ADVERTISEMENT AND REGULATION OF TRADE AND COMMERCE, PRODUCTION, SUPPLY AND DISTRIBUTION) ACT, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.
ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು.
ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಛೇರಿಯಲ್ಲಿ ಅಥವಾ ಕಛೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳತಕ್ಕದ್ದು.
No comments:
Post a Comment
If You Have any Doubts, let me Comment Here